7
ತಾಲ್ಲೂಕು ಬಿಜೆಪಿಯಿಂದ ಅಂಬೇಡ್ಕರ್ ಅವರ 61ನೇ ಪರಿನಿಬ್ಬಾಣ ದಿನಾಚರಣೆ ಕಾರ್ಯಕ್ರಮ

ಬಿಜೆಪಿ ದಲಿತ ಮುಖಂಡರ ನಡುವೆ ವಾಗ್ವಾದ

Published:
Updated:

ಮಾಲೂರು: ಪಟ್ಟಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಅಂಬೇಡ್ಕರ್ ಅವರ 61ನೇ ಪರಿನಿಬ್ಬಾಣ ದಿನಾಚರಣೆ ಆಚರಣೆಯಲ್ಲಿ ದಲಿತ ಸಂಘಟನೆಗಳ ಹಾಗೂ ಬಿಜೆಪಿ ಮುಖಂಡರ ನಡುವೆ ವಾಗ್ವಾದ ನಡೆದು ಕೈ ಕೈ ಮಿಲಾಯಿಸುವ ಹಂತಕ್ಕೆ

ತಲುಪಿತು.

ಪಟ್ಟಣದ ಮಾಸ್ತಿ ವೆಂಕಟೇಶ ಅಯ್ಯಂಗಾರ್ ರಂಗಮಂದಿರದಲ್ಲಿ ತಾಲ್ಲೂಕು ಬಿಜೆಪಿಯಿಂದ ಅಂಬೇಡ್ಕರ್ ಅವರ 61ನೇ ಪರಿನಿಬ್ಬಾಣ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಬಿಜೆಪಿ ಮುಖಂಡರು ಕಾರ್ಯಕ್ರಮಕ್ಕೆ ಮುನ್ನ ಪಟ್ಟಣದ ಬಸ್ ನಿಲ್ದಾಣದ ಬಳಿಯ ಉದ್ಯಾನವನದಲ್ಲಿನ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲು ಮುಂದಾದರು.

ಬಿಜೆಪಿಯ ಮಾಜಿ ಶಾಸಕ ಎ.ನಾಗರಾಜು, ಮುಖಂಡ ಆರ್ ಪ್ರಭಾಕರ್ ಅವರನ್ನು ಉದ್ಯಾನವನದ ಒಳಗೆ ಹೋಗಲು ಅವಕಾಶ ಕಲ್ಪಿಸಿದ ದಲಿತ ಸಂಘಟನೆಗಳ ಕಾರ್ಯಕರ್ತರು ಮಾಜಿ ಸಚಿವ ಎಸ್.ಎನ್.ಕೃಷ್ಣಯ್ಯ ಶೆಟ್ಟಿ ಮತ್ತು ಬೆಂಬಲಿಗರು ತಮಟೆ ವಾದ್ಯಗಳೊಂದಿಗೆ ಪಕ್ಷದ ಬಾವುಟ ಹಿಡಿದು ಅಂಬೇಡ್ಕರ್ ಪ್ರತಿಮೆಗೆ ಮಾಲರ್ಪಣೆ ಮಾಡಲು ಮುಂದದಾಗ ಉದ್ಯಾನವನದ ಬಾಗಿಲಲ್ಲೇ ಅವರನ್ನು ತಡೆದ ಪ್ರಸಂಗ ನಡೆಯಿತು.

ಈ ಸಂದರ್ಭದಲ್ಲಿ ಎರಡೂ ಗುಂಪುಗಳ ನಡುವೆ ಮಾತಿನ ಚಕಮುಕಿ ನಡೆದು ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿತು. ತಕ್ಷಣ ಪೊಲೀಸರ ಮಧ್ಯ ಪ್ರವೇಶದಿಂದ ಪರಿಸ್ಥಿತಿ ತಿಳಿಗೊಂಡಿತು. ಮುಖಂಡ ಎಸ್.ಎನ್.ಕೃಷ್ಣಯ್ಯ ಶೆಟ್ಟಿ ಪೊಲೀಸರ ಬೆಂಗಾವಲಿನಲ್ಲಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

ಪ್ರತಿಮೆಗೆ ಶಾಸಕ ಮಾಲಾರ್ಪಣೆ

‘ಶಿಕ್ಷಣ ಮತ್ತು ಅಧ್ಯಯನದಿಂದ ಬಾಬಾ ಸಾಹೇಬ್ ಅಂಬೇಡ್ಕರ್ ಉನ್ನತ ಮಟ್ಟಕ್ಕೇರಲು ಸಾಧ್ಯವಾಯಿತು. ಅದ್ದರಿಂದ ಪ್ರತಿಯೊಬ್ಬರು ಓದುವ ಮತ್ತು ಅಧ್ಯಯನ ಮಾಡುವ ಹವ್ಯಾಸ ಬೆಳೆಸಿಕೊಳ್ಳಬೇಕು’ ಎಂದು ಶಾಸಕ ಕೆ.ಎಸ್.ಮಂಜುನಾಥಗೌಡ ತಿಳಿಸಿದರು.

61ನೇ ಪರಿನಿಬ್ಬಾಣ ದಿನಾಚರಣೆ ಅಂಗವಾಗಿ ಪಟ್ಟಣದ ಬಸ್ ನಿಲ್ದಾಣದ ಬಳಿಯ ಉದ್ಯಾನ ವನದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಬುಧವಾರ ಮಾಲಾರ್ಪಣೆ ಅರ್ಪಿಸಿ ಮಾತನಾಡಿದರು.

ಅಂಬೇಡ್ಕರ್ ಅವರು ನಿಡಿದ ಸಂವಿಧಾನ ಭಾರತಕ್ಕೆ ಮಾತ್ರವಲ್ಲದೆ ಇಡೀ ವಿಶ್ವಕ್ಕೆ ಮಾದರಿಯಾಗಿದೆ ಎಂದು ಹೇಳಿದರು.

ತಳ ಸಮುದಾಯಕ್ಕೆ ಸ್ಥಾನಮಾನ, ಅಸ್ಪೃಶ್ಯತೆ ನಿವಾರಣೆ ಹಾಗೂ ಮಹಿಳೆಯರಿಗೆ ಸಮಾನತೆಗೆ ಶ್ರಮಿಸಿದ ಮಹಾ ಮಾನವತವಾದಿ ಅಂಬೇಡ್ಕರ್. ಅವರ ಬಗ್ಗೆ ಎಲ್ಲರು ತಿಳಿದುಕೊಳ್ಳಬೇಕು ಎಂದು ಅವರು ಹೇಳಿದರು.

ತಹಶೀಲ್ದಾರ್ ಗಿರೀಶ್, ಜಿಲ್ಲಾ ಪಂಚಾಯತಿ ಸದಸ್ಯ ಎಚ್.ವಿ. ಶ್ರೀನಿವಾಸ್, ಮಾಜಿ ಸದಸ್ಯ ರಾಮಸ್ವಾಮಿ ರೆಡ್ಡಿ, ಪುರಸಭಾಧ್ಯಕ್ಷ ಎಂ.ರಾಮಮೂರ್ತಿ, ಸದಸ್ಯ ಮುರಳಿ, ತಾಲ್ಲೂಕು ಪಂಚಾಯಿತಿ ಸದಸ್ಯ ಸದಾನಂದ, ದಲಿತ ಸಂಘಟನೆಯ ಮುಖಂಡ ಶ್ರೀನಿವಾಸ್ ಭಾಗವಹಿಸಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry