ವಿರಾಟ್ ಪಡೆ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಗೆಲುವು ಸಾಧಿಸಲಿದೆ: ದ್ರಾವಿಡ್ ವಿಶ್ವಾಸ

ನವದೆಹಲಿ: ಜ. 5ರಿಂದ ಆರಂಭವಾಗಲಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ ಗೆಲ್ಲುವು ಸಾಧಿಸುತ್ತದೆ ಎಂದು 19 ವರ್ಷದ ವಯೋಮಾನ ಕ್ರಿಕೆಟ್ ತಂಡದ ಕೋಚ್ ರಾಹುಲ್ ದ್ರಾವಿಡ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
‘ದಕ್ಷಿಣ ಆಫ್ರಿಕಾ ವಿರುದ್ಧ ಆಡಲು ಉತ್ತಮ ವೇಗಿಗಳು, ಸ್ಪೀನರ್‌ಗಳಾದ(ಆರ್.ಅಶ್ವಿನ್, ಜಡೇಜ) ಆಲೌರೌಂಡರ್ ಹಾರ್ದಿಕ್ ಪಾಂಡ್ಯ ಒಳಗೊಂಡ ಭಾರತ ತಂಡ ಬಲಿಷ್ಠವಾಗಿದ್ದು, ಎದುರಾಳಿ ತಂಡವನ್ನು ಸೋಲಿಸುವ ಸಾಮರ್ಥ್ಯ ಹೊಂದಿದೆ’ ಎಂದರು.
ಗುರುವಾರ ಪಿಟಿಐ ಸಂದರ್ಶನದಲ್ಲಿ ಮಾತನಾಡಿದ ಅವರು, ‘ಭಾರತ ಉತ್ತಮ ಪ್ರದರ್ಶನ ತೋರಲು ಇದು ಉತ್ತಮ ಸಮಯ ಎಂದು ಭಾವಿಸಿದ್ದೇನೆ’ ಎಂದು ತಿಳಿಸಿದ್ದಾರೆ.
ಸದ್ಯ ಭಾರತ ತಂಡ 124 ರೇಟಿಂಗ್ ಪಾಯಿಂಟ್ಸ್ ಹೊಂದಿದ್ದು ಟೆಸ್ಟ್ ಕ್ರಿಕೆಟ್‌ನಲ್ಲಿ ಆಗ್ರಸ್ಥಾನದಲ್ಲಿದೆ. ಇತ್ತೀಚೆಗೆ ಮುಕ್ತಾಯಗೊಂಡ ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ 1–0ರಲ್ಲಿ ಸರಣಿ ಜಯ ಸಾಧಿಸಿತ್ತು.
ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಭಾರತ ಸತತ 9 ಟೆಸ್ಟ್ ಸರಣಿಗಳಲ್ಲಿ ಜಯ ಸಾಧಿಸಿದ ದಾಖಲೆ ಮಾಡಿತ್ತು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.