ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಪ್ಪಳಿಯಲ್ಲಿ ಸಾಹಿತ್ಯ ಅಧ್ಯಯನ ಶಿಬಿರ 29ರಿಂದ

Last Updated 7 ಡಿಸೆಂಬರ್ 2017, 19:30 IST
ಅಕ್ಷರ ಗಾತ್ರ

ತೀರ್ಥಹಳ್ಳಿ: ಕುವೆಂಪು ಅವರ 114ನೇ ಜಯಂತಿ ಹಾಗೂ ವಿಶ್ವಮಾನವ ದಿನಾಚರಣೆ ಅಂಗವಾಗಿ ಕುಪ್ಪಳಿಯಲ್ಲಿ ಡಿಸೆಂಬರ್‌ 29 ಮತ್ತು 30ರಂದು ‘ಕುವೆಂಪು ಸಾಹಿತ್ಯ ಅಧ್ಯಯನ ಶಿಬಿರ’ವನ್ನು ಹಮ್ಮಿಕೊಳ್ಳಲಾಗಿದೆ ಎಂದು ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದ ಸಮ ಕಾರ್ಯದರ್ಶಿ ಕಡಿದಾಳ್‌ ಪ್ರಕಾಶ್‌ ತಿಳಿಸಿದ್ದಾರೆ.

ಕುಪ್ಪಳಿಯ ಕುವೆಂಪು ಪ್ರತಿಷ್ಠಾನ, ಬೆಂಗಳೂರಿನ ಅವಿರತ ಟ್ರಸ್ಟ್ ಸಹಯೋಗದಲ್ಲಿ ಅಧ್ಯಯನ ಶಿಬಿರ ಹಮ್ಮಿಕೊಳ್ಳಲಾಗಿದೆ.ಮೊದಲು ಹೆಸರು ನೋಂದಾಯಿಸುವ 80 ಶಿಬಿರಾರ್ಥಿಗಳಿಗೆ ಮಾತ್ರ ಅವಕಾಶವಿದೆ. ಎರಡೂ ದಿನ ಊಟ ಮತ್ತು ವಸತಿ ಉಚಿತ. ಶಿಬಿರಾರ್ಥಿಗಳಿಗೆ ‘ಮಲೆಗಳಲ್ಲಿ ಮದುಮಗಳು’ ಕಾದಂಬರಿ ಪುಸ್ತಕವನ್ನು ಉಚಿತವಾಗಿ ನೀಡಲಾಗುವುದು.

ನೋಂದಾಯಿಸಿಕೊಳ್ಳಲು contact@aviratha.org ಅಥವಾ https://goo.gl/wVqCBE ಅಥವಾ ಮೊಬೈಲ್‌ 9880802642 ಸಂಪರ್ಕಿಸಬಹುದು ಎಂದು ಪ್ರಕಾಶ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT