4

ಟಿಪ್ಪು, ಸಿದ್ದರಾಮಯ್ಯ ಚಿತ್ರ ವಿರೂಪ: ಆರೋಪಿಗೆ ನಿರೀಕ್ಷಣಾ ಜಾಮೀನು

Published:
Updated:

ಬೆಂಗಳೂರು: ಟಿಪ್ಪು ಸುಲ್ತಾನ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಫೋಟೊಗಳನ್ನು ವಿರೂಪಗೊಳಿಸಿ ‘ಫೇಸ್‌ಬುಕ್’ನಲ್ಲಿ ಪೋಸ್ಟ್ ಮಾಡುವ ಮೂಲಕ ಕೋಮುಗಲಭೆ ಸೃಷ್ಟಿಸಲು ಯತ್ನಿಸಿದ ಆರೋಪ ಎದುರಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯ ನಿವಾಸಿ ಯೋಗೀಶ್ ಪ್ರಭು ಎಂಬುವರಿಗೆ ಹೈಕೋರ್ಟ್ ಷರತ್ತುಬದ್ಧ ನಿರೀಕ್ಷಣಾ ಜಾಮೀನು ನೀಡಿದೆ.

ಈ ಕುರಿತು ಯೋಗೀಶ್ ಪ್ರಭು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಬೂದಿಹಾಳ್ ಅವರಿದ್ದ ಏಕಸದಸ್ಯ ಪೀಠ ಗುರುವಾರ ಪುರಸ್ಕರಿಸಿದೆ.

‘ಯೋಗೇಶ್‌ ಪ್ರಭು 2017ರ ಅಕ್ಟೋಬರ್ 26ರಂದು ಟಿಪ್ಪು ಮತ್ತು ಸಿದ್ದರಾಮಯ್ಯನವರ ವಿರೂಪಗೊಳಿಸಿದ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ’ ಎಂದು ಆರೋಪಿಸಿ ಯು.ಟಿ.ತೌಸೀಫ್‌ ಎಂಬುವರು ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry