7

ಕೊಕೇನ್‌ ಮಾರಾಟ; ಆಫ್ರಿಕಾ ಪ್ರಜೆ ಸೆರೆ

Published:
Updated:

ಬೆಂಗಳೂರು: ಕೊಕೇನ್ ಮಾರಾಟ ಮಾಡುತ್ತಿದ್ದ ಆರೋಪದಡಿ ಆಫ್ರಿಕಾ ಪ್ರಜೆ ಓಬಿವುರಾನಟ್ (34) ಎಂಬಾತನನ್ನು ಸಿಸಿಬಿ ಪೊಲೀಸರು ಗುರುವಾರ ಬಂಧಿಸಿದ್ದಾರೆ.

ಹೆಣ್ಣೂರು ಮುಖ್ಯರಸ್ತೆಯ ತಿಮ್ಮಯ್ಯ ಗೌಡ ಲೇಔಟ್‌ನಲ್ಲಿ ವಾಸವಿದ್ದ ಓಬಿವುರಾನಟ್‌ ಮನೆಯ ಮೇಲೆ ದಾಳಿ ಮಾಡಿದ್ದ ಸಿಸಿಬಿ ಇನ್‌ಸ್ಪೆಕ್ಟರ್‌ ಕೆ.ನಾರಾಯಣ ಗೌಡ ನೇತೃತ್ವದ ತಂಡ, 41 ಗ್ರಾಂ ಕೊಕೇನ್‌, 4 ಮೊಬೈಲ್‌, 2 ಲ್ಯಾಪ್‌ಟಾಪ್‌ ಹಾಗೂ ದ್ವಿಚಕ್ರ ವಾಹನ ಜಪ್ತಿ ಮಾಡಿದೆ.

‘ಕೆಲ ವರ್ಷಗಳ ಹಿಂದೆ ನಗರಕ್ಕೆ ಬಂದಿದ್ದ ಆರೋಪಿ, ಮನೆಯಲ್ಲೇ ಕೊಕೇನ್‌ ಇಟ್ಟುಕೊಂಡು ಮಾರಾಟ ಮಾಡುತ್ತಿದ್ದ. ಕೆಲ ಸಾಫ್ಟ್‌ವೇರ್‌ ಕಂಪೆನಿಯ ಉದ್ಯೋಗಿಗಳು, ವಿದ್ಯಾರ್ಥಿಗಳು ಈತನ ಗಿರಾಕಿಗಳಾಗಿದ್ದರು. ಈ ಬಗ್ಗೆ ಮಾಹಿತಿ ಪಡೆದು ದಾಳಿ ಮಾಡಿದೆವು. ಆತನ ವಿರುದ್ಧ ಎನ್‌ಡಿಪಿಎಸ್‌ ಕಾಯ್ದೆ ಅಡಿ ಕೊತ್ತನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ’ ಎಂದು ಸಿಸಿಬಿ ಪೊಲೀಸರು ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry