ಶನಿವಾರ, ಮಾರ್ಚ್ 6, 2021
21 °C

13ರಂದು ₹ 300 ಕೋಟಿ ಕಾಮಗಾರಿ ಉದ್ಘಾಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

13ರಂದು ₹ 300 ಕೋಟಿ ಕಾಮಗಾರಿ ಉದ್ಘಾಟನೆ

ಬಸವಕಲ್ಯಾಣ: ’ಮುಖ್ಯಮಂತ್ರಿ ಸಿದ್ದರಾಮಯ್ಯನವರು ಡಿ.13 ರಂದು ಇಲ್ಲಿ ₹ 300 ಕೋಟಿಯ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಹೊಸ ಯೋಜನೆಗಳ ಶಂಕುಸ್ಥಾಪನೆ ನೆರವೆರಿಸಲಿದ್ದಾರೆ’ ಎಂದು ಶಾಸಕ ಮಲ್ಲಿಕಾರ್ಜುನ ಖೂಬಾ ತಿಳಿಸಿದರು. ಇಲ್ಲಿನ ಮಿನಿ ವಿಧಾನಸೌಧದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಅಧಿಕಾರಿಗಳ ತಾಲ್ಲೂಕು ಮಟ್ಟದ ಸಭೆಯಲ್ಲಿ ಅವರು ಮಾತನಾಡಿದರು.

‘ಅಂದು ಬೆಳಿಗ್ಗೆ 10.30 ಗಂಟೆಗೆ ಮುಖ್ಯಮಂತ್ರಿಯವರು ಬಸವಕಲ್ಯಾಣ ಅಭಿವೃದ್ಧಿ ಮಂಡಳಿಯಿಂದ ನಿರ್ಮಿಸಿರುವ 6,500 ಆಸನಗಳ ಸಭಾಭವನದ ಉದ್ಘಾಟನೆ ನೆರವೇರಿಸುವರು. ಕೊಂಗಳಿ ಬ್ಯಾರೇಜ್ ದಿಂದ ಚುಳಕಿನಾಲಾ ಜಲಾಶಯ ಮತ್ತು ತಾಲ್ಲೂಕಿನ 12 ಕೆರೆಗಳಿಗೆ ನೀರು ಭರ್ತಿ ಮಾಡುವ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸುವರು. ಇಲ್ಲಿನ ತೇರು ಮೈದಾನದಲ್ಲಿ ಸಾರ್ವಜನಿಕ ಕಾರ್ಯಕ್ರಮ ನಡೆಯಲಿದೆ ಎಂದ ಅವರು, ಅಪೂರ್ಣ ಯೋಜನೆಗಳ ಪಟ್ಟಿಯೂ ಸಿದ್ಧಪಡಿಸಬೇಕು’ ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.

ಉಪ ವಿಭಾಗಾಧಿಕಾರಿ ಶರಣಬಸಪ್ಪ ಕೊಟ್ಟಪ್ಪಗೋಳ, ತಹಶೀಲ್ದಾರ್ ಜಗನ್ನಾಥರೆಡ್ಡಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ವಿಜಯ

ಕುಮಾರ ಮಡ್ಡೆ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.

ಪರಿಶೀಲನೆ: ಡಿ.13 ರಂದು ಮುಖ್ಯಮಂತ್ರಿ ಅವರ ಕಾರ್ಯಕ್ರಮ ನಡೆಯಲಿರುವ ಇಲ್ಲಿನ ತೇರು ಮೈದಾನದ ಸ್ಥಳವನ್ನು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಬುಧವಾರ ಪರಿಶೀಲಿಸಿದರು. ಕೆಪಿಸಿಸಿ ಕಾರ್ಯದರ್ಶಿ ಬಿ.ನಾರಾಯಣರಾವ, ಜಿಲ್ಲಾಧಿಕಾರಿ ಎಚ್.ಆರ್.ಮಹಾದೇವ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.

* * 

ವಿವಿಧ ಇಲಾಖೆಗಳಿಂದ ಪೂರ್ಣಗೊಂಡಿರುವ ಕಾಮಗಾರಿಗಳ ವಿವರ ಸಲ್ಲಿಸಬೇಕು. ಯಾವುದೇ ಸಮಸ್ಯೆಗಳಿದ್ದರೆ ಮಾಹಿತಿ ನೀಡಬೇಕು

ಮಲ್ಲಿಕಾರ್ಜುನ ಖೂಬಾ ಶಾಸಕ

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.