ಭಾನುವಾರ, ಮಾರ್ಚ್ 7, 2021
31 °C

ಬಿಜೆಪಿ ಪರ ಚುನಾವಣಾ ಪ್ರಚಾರ ನಡೆಸುತ್ತಿದ್ದ ಆರ್ಚಕನ ಮೇಲೆ ಹಲ್ಲೆ

ಏಜೆನ್ಸಿಸ್‌ Updated:

ಅಕ್ಷರ ಗಾತ್ರ : | |

ಬಿಜೆಪಿ ಪರ ಚುನಾವಣಾ ಪ್ರಚಾರ ನಡೆಸುತ್ತಿದ್ದ ಆರ್ಚಕನ ಮೇಲೆ ಹಲ್ಲೆ

ಜುನಾಗಢ: ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಮಾಡುತ್ತಿದ್ದ ಸ್ವಾಮಿ ನಾರಾಯಣ ಗುರುಕುಲದ ಆರ್ಚಕ ಸ್ವಾಮಿ ಭಕ್ತಿ ಪ್ರಸಾದ್‌ ಅವರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.

ಗುರುವಾರ ರಾತ್ರಿ ಸ್ಥಳೀಯ ಬಿಜೆಪಿ ಅಭ್ಯರ್ಥಿ ಕಿರಿತ್‌ ಪಟೇಲ್‌ ಪರ ಭಕ್ತಿ ಪ್ರಸಾದ್‌ ಪ್ರಚಾರ ನಡೆಸುತ್ತಿದ್ದ ವೇಳೆ ಘಟನೆ ನಡೆದಿದೆ. 

ಘಟನೆಯಲ್ಲಿ ಗಾಯಗೊಂಡಿದ್ದ ಆರ್ಚಕರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಗ್ಯ ಸಹಜ ಸ್ಥಿತಿಯಲ್ಲಿದೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

‘ನನ್ನ ಮೇಲೆ ನಡೆದ ಹಲ್ಲೆ ಹಿಂದೆ ಕಾಂಗ್ರೆಸ್‌ ಕೈವಾಡವಿದೆ’ ಎಂದು ಸ್ವಾಮಿ ಭಕ್ತಿ ಪ್ರಸಾದ್‌ ಆರೋಪಿಸಿದ್ದಾರೆ.

ಗುಜರಾತ್‌ನಲ್ಲಿ ಶನಿವಾರ(ಡಿ. 9) ಮೊದಲ ಹಂತದ ಮತದಾನ ನಡೆಯಲಿದ್ದು, ಡಿ.14ರಂದು ಎರಡನೇ ಹಂತದ ಮತದಾನ ನಡೆಯಲಿದೆ.
ಡಿ.18ಕ್ಕೆ ಪಲಿತಾಂಶ ಪ್ರಕಟವಾಗಲಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.