ಬಡ್ತಿ: ರಾಷ್ಟ್ರಪತಿ ಭೇಟಿಗೆ ನಿಯೋಗ

ಮೈಸೂರು: ‘ಬಡ್ತಿ ಮೀಸಲಾತಿ ಕಾನೂನು ಜಾರಿಗೆ ತರಲು ಸರ್ಕಾರ ಬದ್ಧವಾಗಿದೆ. ಅಗತ್ಯಬಿದ್ದರೆ ನಿಯೋಗದಲ್ಲಿ ತೆರಳಿ ರಾಷ್ಟ್ರಪತಿಯನ್ನು ಭೇಟಿ ಮಾಡಲಾ
ಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಲ್ಲಿ ಶುಕ್ರವಾರ ಹೇಳಿದರು.
ಡಿ.ಸಂಜೀವಯ್ಯ ಸ್ಮಾರಕ ಶಿಕ್ಷಣ ಸಂಸ್ಥೆಯ ಕಾಲೇಜು ಮತ್ತು ವಿದ್ಯಾರ್ಥಿನಿಲಯ ಕಟ್ಟಡಗಳ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿ, ‘ರಾಜ್ಯಪಾಲರು ಮಸೂದೆಗೆ ಅಂಕಿತ ಹಾಕದೆ ವಾಪಸ್ ಕಳುಹಿಸಿದ್ದು, ರಾಷ್ಟ್ರಪತಿ ಅಂಕಿತ ಅಗತ್ಯ ಎಂದು ಹೇಳಿದ್ದಾರೆ. ಈ ಸಂಬಂಧ ರಾಜ್ಯಪಾಲರನ್ನೂ ಭೇಟಿ ಮಾಡಿ ಮಾತುಕತೆ ನಡೆಸುತ್ತೇನೆ’ ಎಂದರು.
‘ಬಡ್ತಿ ಮೀಸಲಾತಿ ಕಾನೂನು ಜಾರಿಗೆ ತರದಂತೆ ನನ್ನ ಹಾಗೂ ಸರ್ಕಾರದ ಮೇಲೆ ತೀವ್ರ ಒತ್ತಡ ಬಂದಿದೆ. ನಾನು ಯಾವುದೇ ಒತ್ತಡಕ್ಕೂ ಮಣಿದಿಲ್ಲ. ಕಾನೂನು ಜಾರಿಗೊಳಿಸಲು ಸರ್ಕಾರ ಬದ್ಧವಾಗಿದೆ’ ಎಂದು ಸ್ಪಷ್ಟಪಡಿಸಿದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.