ಜಾತಿಗಣತಿಗೆ ₹ 152 ಕೋಟಿ ವೆಚ್ಚ!

ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನಡೆಸಿದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ (ಜಾತಿ ಗಣತಿ) ಬರೋಬ್ಬರಿ ₹ 152 ಕೋಟಿ ಖರ್ಚಾಗಿದೆ.
ಸಾಮಾಜಿಕ ಕಾರ್ಯಕರ್ತ ವೆಂಕಟೇಶ್ ಎಂಬುವರು ಮಾಹಿತಿ ಹಕ್ಕು ಕಾಯ್ದೆಯಡಿ ಪಡೆದ ಮಾಹಿತಿಯಲ್ಲಿ ಈ ವಿಷಯ ಬಹಿರಂಗವಾಗಿದೆ.2015ರ ಏಪ್ರಿಲ್‌ನಲ್ಲಿ ಈ ಸಮೀಕ್ಷೆ ನಡೆದಿದ್ದು, ಸರ್ಕಾರ ವರದಿಯನ್ನು ಇನ್ನೂ ಬಹಿರಂಗಪಡಿಸಿಲ್ಲ.
31 ಜಿಲ್ಲೆಗಳಲ್ಲಿ ನಡೆದ ಸಮೀಕ್ಷೆಯಲ್ಲಿ 1.26 ಲಕ್ಷ ಸಿಬ್ಬಂದಿ ಭಾಗಿಯಾಗಿದ್ದರು. ಇವರಿಗೆ ₹ 81.24 ಕೋಟಿ ಸಂಭಾವನೆಯಾಗಿ ನೀಡಲಾಗಿದೆ. ಈ ಪೈಕಿ ಗಣತಿದಾರರಿಗೆ ₹69.64 ಕೋಟಿ, ಮೇಲ್ವಿಚಾರಕರಿಗೆ ₹ 11.60 ಕೋಟಿ ನೀಡಲಾಗಿದೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.