ಸಿದ್ದರಾಮಯ್ಯ ಹಿಂದೂ ವಿರೋಧಿ: ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರ್ ರಾವ್ ಟೀಕೆ

ಬೆಳಗಾವಿ: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಂದೂ ವಿರೋಧಿಯಾಗಿದ್ದಾರೆ’ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರ್ ರಾವ್ ಆರೋಪಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು, ‘ಮುಖ್ಯಮಂತ್ರಿ ಸಿದ್ದರಾಮಯ್ಯ ಟಿಪ್ಪು ಜಯಂತಿ ಆಚರಣೆ ಮಾಡುವ ಮೂಲಕ ಹಿಂದೂ ವಿರೋಧಿಯಾಗಿದ್ದಾರೆ. ರಾಜ್ಯದಲ್ಲಿ ರೈತರ ಆತ್ಮಹತ್ಯೆಗಳು ನಡೆಯುತ್ತಿದ್ದರೂ ಕೃಷಿ ಹಾಗೂ ರೈತರ ಬಗ್ಗೆ ಸಿದ್ದರಾಮಯ್ಯ ಸರ್ಕಾರಕ್ಕೆ ಕಾಳಜಿ ಇಲ್ಲ’ ಎಂದು ಟೀಕಿಸಿದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.