ಸೋಮವಾರ, ಮಾರ್ಚ್ 8, 2021
19 °C

ಸುನೀಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ: ಆರೋಪ ನಿರಾಕರಿಸುತ್ತಿರುವ ರವಿ ಬೆಳಗೆರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸುನೀಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ: ಆರೋಪ ನಿರಾಕರಿಸುತ್ತಿರುವ ರವಿ ಬೆಳಗೆರೆ

ಬೆಂಗಳೂರು: ಸಹೋದ್ಯೋಗಿ ಪತ್ರಕರ್ತ ಸುನೀಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ನೀಡಿದ್ದ ಆರೋಪದ ಮೇಲೆ ಬಂಧನವಾಗಿರುವ ‘ಹಾಯ್ ಬೆಂಗಳೂರು’ ಪತ್ರಿಕೆಯ ಸಂಸ್ಥಾಪಕ ರವಿ ಬೆಳಗೆರೆ ಶನಿವಾರ ವಿಚಾರಣೆ ವೇಳೆ ತಮ್ಮ ಮೇಲಿನ ಆರೋಪವನ್ನು ನಿರಾಕರಿಸುತ್ತಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಬೆಂಗಳೂರು ಸಿಸಿಬಿ ಪೊಲೀಸರು ಶುಕ್ರವಾರ ರವಿ ಬೆಳಗೆರೆ ಅವರನ್ನು ಬಂಧಿಸಿದ್ದು, ಇಂದು ವಿಚಾರಣೆ ನಡೆಸುತ್ತಿದ್ದಾರೆ.

ರವಿ ಬೆಳಗೆರೆ ಅವರ ಅನಾರೋಗ್ಯದ ಕಾರಣ ಇಂದು ಅವರ ಆರೋಗ್ಯ ತಪಾಸಣೆ ನಡೆಸಿದ ಬಳಿಕ ಪೊಲೀಸರು ವಿಚಾರಣೆ ಆರಂಭಿಸಿದ್ದಾರೆ. ಅನಾರೋಗ್ಯ ನಿಮಿತ್ತ ಪೊಲೀಸರು ಹೆಚ್ಚಿನ ಒತ್ತಡ ಹಾಕದೆ ವಿಚಾರಣೆ ನಡೆಸುತ್ತಿದ್ದಾರೆ. ಪ್ರತಿ ಗಂಟೆ, ಎರಡು ಗಂಟೆಗೆ ಒಮ್ಮೆ ಅವರ ಆರೋಗ್ಯ ತಪಾಸಣೆ ನಡೆಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಹೆಗ್ಗರವಳ್ಳಿ ಹತ್ಯೆಗೆ ಯಾವ ಕಾರಣಕ್ಕೆ ಸುಪಾರಿ ನೀಡಲಾಗಿತ್ತು, ಅದು ವೈಯಕ್ತಿಕ ಕಾರಣವೇ?, ವೈಯಕ್ತಿಕ ಆಗಿದ್ದರೆ ಯಾವ ವಿಷಯಕ್ಕೆ ಎಂಬೆಲ್ಲಾ ಪ್ರಶ್ನೆಗಳನ್ನು ಪೊಲೀಸರು ಕೇಳುತ್ತಿದ್ದು, ರವಿ ಬೆಳಗೆರೆ ಈ ಆರೋಪವನ್ನು ನಿರಾಕರಿಸುತ್ತಿದ್ದಾರೆ ಎಂದು ಮೂಲಗಳು ಹೇಳಿವೆ.

ಪ್ರಕರಣದ ಇತರ ನಾಲ್ವರು ಆರೋಪಿಗಳ ವಿಚಾರಣೆಯೂ ನಡೆಯುತ್ತಿದೆ.

ಇವನ್ನೂ ಓದಿ...

ಪತ್ರಕರ್ತ ಸುನೀಲ್ ಹೆಗ್ಗರವಳ್ಳಿ ಕೊಲೆಗೆ ಸಂಚು; ಸಹೋದ್ಯೋಗಿ ಹತ್ಯೆಗೆ ಸುಪಾರಿ ಸಿಸಿಬಿ ವಶದಲ್ಲಿ ರವಿ ಬೆಳಗೆರೆ

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.