ಗುರುವಾರ , ಮಾರ್ಚ್ 4, 2021
30 °C

ಮೊದಲ ಏಕದಿನ ಕ್ರಿಕೆಟ್ ಪಂದ್ಯ: ಭಾರತಕ್ಕೆ ಆರಂಭಿಕ ಆಘಾತ

ಏಜೆನ್ಸಿಸ್‌ Updated:

ಅಕ್ಷರ ಗಾತ್ರ : | |

ಮೊದಲ ಏಕದಿನ ಕ್ರಿಕೆಟ್ ಪಂದ್ಯ: ಭಾರತಕ್ಕೆ ಆರಂಭಿಕ ಆಘಾತ

ಧರ್ಮಶಾಲಾ: ಇಲ್ಲಿನ ಹಿಮಾಚಲ ಪ್ರದೇಶ ಕ್ರಿಕೆಟ್‌ ಸಂಸ್ಥೆಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ–ಶ್ರೀಲಂಕಾ ನಡುವಿನ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ಬೌಲಿಂಗ್‌ ಆಯ್ಕೆ ಮಾಡಿಕೊಂಡಿದೆ.

ಶಿಖರ್‌ ಧವನ್‌ ಮತ್ತು ರೋಹಿತ್‌ ಶರ್ಮಾ ವಿಕೆಟ್‌ ಕಳೆದುಕೊಳ್ಳುವ ಮೂಲಕ ಭಾರತ ಆರಂಭಿಕ ಆಘಾತ ಅನುಭವಿಸಿದೆ.

ಆತಿಥೇಯ ಭಾರತ ಗೆಲುವಿನ ಮುನ್ನುಡಿ ಬರೆಯುವ ಕನವರಿಕೆಯಲ್ಲಿದೆ. ಬಲಗೈ ಬ್ಯಾಟ್ಸ್‌ಮನ್‌ ರೋಹಿತ್‌ ಶರ್ಮಾ ಏಕದಿನ ಮಾದರಿಯಲ್ಲಿ ಮೊದಲ ಬಾರಿಗೆ ಭಾರತ ತಂಡದ ಸಾರಥ್ಯ ವಹಿಸುತ್ತಿದ್ದಾರೆ. ಹೀಗಾಗಿ ಅವರಿಗೆ ಈ ಸರಣಿ ಅಗ್ನಿ ಪರೀಕ್ಷೆಯ ಕಣವಾಗಿದೆ. ವಿರಾಟ್‌ ಕೊಹ್ಲಿಗೆ ವಿಶ್ರಾಂತಿ ನೀಡಿರುವ ಕಾರಣ ರೋಹಿತ್‌ಗೆ ನಾಯಕತ್ವ ಒಲಿದಿದೆ. ಅವರು ತಂಡವನ್ನು ಮುನ್ನಡೆಸುತ್ತಿರುವ ಭಾರತದ 24ನೇ ಆಟಗಾರ.

ಸದ್ಯ ಆಟ ಮುಂದುವರಿಸಿರುವ ಭಾರತ 5 ಓವರ್‌ಗಳಲ್ಲಿ 2 ವಿಕೆಟ್‌ ನಷ್ಟಕ್ಕೆ 2 ರನ್‌ ಗಳಿಸಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.