ಗುರುವಾರ , ಮಾರ್ಚ್ 4, 2021
30 °C

ಗೋಕರ್ಣ ಬಂದ್ ಭಾಗಶಃ ಯಶಸ್ವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗೋಕರ್ಣ ಬಂದ್ ಭಾಗಶಃ ಯಶಸ್ವಿ

ಗೋಕರ್ಣ: ‘ಹೊನ್ನಾವರದ ಪರೇಶ್ ಮೇಸ್ತ ಎಂಬ ಯುವಕನ ಅನುಮಾನಾಸ್ಪದ ಸಾವಿಗೆ ನ್ಯಾಯ ಒದಗಿಸಿಕೊಡಬೇಕು’ ಎಂದು ಬಿಜೆಪಿ ಕರೆಕೊಟ್ಟಿದ್ದ ಶನಿವಾರದ ಬಂದ್‌ ಭಾಗಶಃ ಯಶಸ್ವಿಯಾಗಿದೆ.

ಘಟನೆಯ ಕುರಿತಂತೆ ಕೆಲ ಅಂಗಡಿಕಾರರು ಸ್ವಯಂ ಪ್ರೇರಿತವಾಗಿ ತಮ್ಮ ಅಂಗಡಿ, ಮುಂಗಟ್ಟುಗಳನ್ನು ಬಂದ್ ಮಾಡಿ ಸಂತಾಪ ಸೂಚಿಸಿ ದರು. ಬಿಜೆಪಿ ಕಾರ್ಯಕರ್ತರು ಮುಖ್ಯ ರಸ್ತೆಯಲ್ಲಿ ಮೆರವಣಿಗೆ ನಡೆಸಿದರು.

ಜಿಲ್ಲಾ ಪಂಚಾಯ್ತಿ ಸದಸ್ಯೆ ಗಾಯತ್ರಿ ಗೌಡ, ಬೆಳಕು ಟ್ರಸ್ಟ್ ಅಧ್ಯಕ್ಷ ನಾಗರಾಜ ನಾಯಕ ಹಾಗೂ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಮಂಜುನಾಥ ಜನ್ನು ಮಾತನಾಡಿ, ‘ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ಗಳಿಗೆ ಬೆಂಬಲ ನೀಡುತ್ತಿದೆ’ ಎಂದರು. ವಿನಾಯಕ ಗುನಗಾ, ವಸಂತ ಶೆಟ್ಟಿ, ಗಣಪತಿ ನಾಯ್ಕ, ಶೇಖರ ನಾಯ್ಕ, ಅರುಣ ಕವರಿ, ದಯಾ ನಾಯ್ಕ ತದಡಿ ಹಾಜರಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.