ಸೋಮವಾರ, ಮಾರ್ಚ್ 1, 2021
24 °C

ಜನವರಿ ಕೊನೆವಾರ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಸಿದ್ದರಾಮಯ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಜನವರಿ ಕೊನೆವಾರ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಸಿದ್ದರಾಮಯ್ಯ

ತುಮಕೂರು: ಜನವರಿ ಕೊನೆ ವಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಭಾನುವಾರ ಮಧುಗಿರಿಯಲ್ಲಿ ಅಭಿವೃದ್ದಿ ಕಾಮಗಾರಿ ಉದ್ಘಾಟಿಸುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದರು.

ಬೇರೆ ಪಕ್ಷದವರು ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿಕೊಳ್ಳಲಿ. ಕಾಂಗ್ರೆಸ್ ಪಕ್ಷದಲ್ಲಿ ಆಕಾಂಕ್ಷಿಗಳ ಸಂಖ್ಯೆ ಹೆಚ್ಚು. ಹೀಗಾಗಿ ಪಟ್ಟಿ ಪ್ರಕಟಿಸುವಲ್ಲಿ ವಿಳಂಬವಾಗಲಿದೆ ಎಂದರು.

ಪರಮೇಶ್ವರ್ ಅವರು ಪಕ್ಷದಿಂದ ಸಮಾವೇಶ ನಡೆಸುತ್ತಿದ್ದಾರೆ. ನಾನು ಸರ್ಕಾರದಿಂದ ಅಭಿವೃದ್ದಿ ಸಮಾವೇಶದಲ್ಲಿ ಭಾಗವಹಿಸುತ್ತಿದ್ದೇನೆ ಎಂದರು.

ಬಿಜೆಪಿ ಪಕ್ಷದ ಪರಿವರ್ತನಾ ಯಾತ್ರೆ ಸಂಪೂರ್ಣ ವಿಫಲವಾಗಿದೆ. ಆದರೆ, ಬಿಜೆಪಿ ಮುಖಂಡರು ಯಶಸ್ವಿಯಾಗಿದೆ ಎಂದು ಹೇಳಿಕೊಳ್ಳುತ್ತಿದ್ದಾರಷ್ಟೇ ಎಂದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.