7

₹ 1,200 ಕೋಟಿ ವೆಚ್ಚದ ಕಾಮಗಾರಿಗಳ ಉದ್ಘಾಟನೆ

Published:
Updated:

ಆನೇಕಲ್‌: ಪಟ್ಟಣಕ್ಕೆ ಕಾವೇರಿ ನೀರು ಪೂರೈಕೆ ಉದ್ಘಾಟನೆ ಸೇರಿದಂತೆ ತಾಲ್ಲೂಕಿನಲ್ಲಿ ಕೈಗೊಳ್ಳಲಾಗಿರುವ ಸುಮಾರು ₹ 1,200 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯ ಶನಿವಾರ (ಡಿ.9) ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ನೆರವೇರಿಸಲಿದ್ದು ಈ ಸಲುವಾಗಿ ಭರದ ಸಿದ್ದತೆ ನಡೆದಿದೆ.

ಶಾಸಕ ಬಿ.ಶಿವಣ್ಣ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಎಂ.ಎಸ್.ಅರ್ಚನಾ ಅವರು ಅಧಿಕಾರಿಗಳ ಸಭೆ ನಡೆಸಿ ಮುಖ್ಯಮಂತ್ರಿಗಳ ಆಗಮನದ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸಿದರು.

ಅಧಿಕಾರಿಗಳೊಂದಿಗೆ ಸಭಾ ಕಾರ್ಯಕ್ರಮದ ವೇದಿಕೆ ವ್ಯವಸ್ಥೆ ಹಾಗೂ  ಮುಖ್ಯಮಂತ್ರಿಗಳ ಆಗಮನದ ಹಿನ್ನೆಲೆಯಲ್ಲಿ ವಿವಿಧ ಸಿದ್ದತೆಗಳು ಸಮರೋಪಾದಿಯಲ್ಲಿ ನಡೆದಿವೆ ಎಂದು ಶಾಸಕರು ತಿಳಿಸಿದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ಟಿ.ಕೆ.ರಮೇಶ್‌, ತಹಶೀಲ್ದಾರ್ ದಿನೇಶ್, ವಿಶೇಷ ತಹಶೀಲ್ದಾರ್ ಮಂಜುನಾಥ್, ಹಿಂದುಳಿದ ವರ್ಗಗಳ ಇಲಾಖೆಯ ಜಿಲ್ಲಾಧಿಕಾರಿ ನೀನಾ ಹಾಜರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry