ಶನಿವಾರ, ಫೆಬ್ರವರಿ 27, 2021
31 °C

ವಿಶ್ವ ಹಾಕಿ ಲೀಗ್‌ ಫೈನಲ್‌ನಲ್ಲಿ ಭಾರತಕ್ಕೆ ಕಂಚು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಶ್ವ ಹಾಕಿ ಲೀಗ್‌ ಫೈನಲ್‌ನಲ್ಲಿ ಭಾರತಕ್ಕೆ ಕಂಚು

ಭುವನೇಶ್ವರ: ಜರ್ಮನಿ ತಂಡವನ್ನು 2–1 ಗೋಲುಗಳಿಂದ ಮಣಿಸಿದ ಭಾರತ ತಂಡ ವಿಶ್ವ ಹಾಕಿ ಲೀಗ್‌ ಫೈನಲ್‌ನಲ್ಲಿ ಕಂಚಿನ ಪದಕವನ್ನು ತನ್ನದಾಗಿಸಿಕೊಂಡಿತು.

ಇಲ್ಲಿನ ಕಳಿಂಗ ಕ್ರೀಡಾಂಗಣದಲ್ಲಿ ಭಾನುವಾರ ಸಂಜೆ ನಡೆದ ಪಂದ್ಯದಲ್ಲಿ ಭಾರತ ಪರ ಎಸ್‌.ವಿ.ಸುನಿಲ್‌ (21ನೇ ನಿಮಿಷ) ಮತ್ತು ಹರ್ಮನ್‌ಪ್ರೀತ್‌ ಸಿಂಗ್‌ (54ನೇ ನಿ) ಗೋಲು ಗಳಿಸಿದರು.

‘ಬಿ’ ಗುಂಪಿನ ತನ್ನ ಮೊದಲ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ ವಿರುದ್ಧ 1–1 ಗೋಲುಗಳಿಂದ ಡ್ರಾ ಮಾಡಿಕೊಂಡಿದ್ದ ಮನ್‌ಪ್ರೀತ್‌ ಸಿಂಗ್‌ ಬಳಗ ಆ ನಂತರದ ಹೋರಾಟಗಳಲ್ಲಿ ಇಂಗ್ಲೆಂಡ್‌ ಮತ್ತು ಜರ್ಮನಿ ವಿರುದ್ಧ ಸೋತಿತ್ತು.

ಆದರೆ, ಬೆಲ್ಜಿಯಂ ಎದುರಿನ ಕ್ವಾರ್ಟರ್‌ ಫೈನಲ್‌ನಲ್ಲಿ ಆತಿಥೇಯರು ಶೂಟೌಟ್‌ನಲ್ಲಿ 3–2 ಗೋಲುಗಳಿಂದ ಗೆದ್ದಿದ್ದರು. ಸೆಮಿಫೈನಲ್‌ನಲ್ಲಿ ತಂಡ ಅರ್ಜೆಂಟೀನಾ ವಿರುದ್ಧ ಮುಗ್ಗರಿಸಿತ್ತು.

2015ರಲ್ಲಿ ರಾಯಪುರದಲ್ಲಿ ನಡೆದ ವಿಶ್ವ ಹಾಕಿ ಲೀಗ್‌ ಫೈನಲ್‌ನಲ್ಲಿ ಭಾರತ ಕಂಚಿನ ಪದಕ ಗೆದ್ದಿತ್ತು. 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.