ಗುರುವಾರ , ಫೆಬ್ರವರಿ 25, 2021
30 °C

ಗೋಧಿ ಬಿತ್ತನೆ ಪ್ರಮಾಣ ಇಳಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

ಗೋಧಿ ಬಿತ್ತನೆ ಪ್ರಮಾಣ ಇಳಿಕೆ

ನವದೆಹಲಿ: ಪ್ರಸಕ್ತ ಹಿಂಗಾರು ಹಂಗಾಮು ಅವಧಿಯಲ್ಲಿ  ಬಿತ್ತನೆ ಕಾರ್ಯ ತಡವಾಗಿ ಆರಂಭವಾಗಿದೆ. ಇದರಿಂದ ಗೋಧಿ ಬಿತ್ತನೆ ಪ್ರಮಾಣದಲ್ಲಿ ಶೇ 6.23 ರಷ್ಟು ಇಳಿಕೆ ಕಂಡಿದೆ.

ಕಳೆದ ವರ್ಷ 20.4 ಕೋಟಿ ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ಆಗಿತ್ತು. ಈ ಬಾರಿ 19 ಕೋಟಿ ಹೆಕ್ಟೇರ್‌ ಪ್ರದೇಶಗಳಲ್ಲಿ ಗೋಧಿ ಬಿತ್ತನೆಯಾಗಿದೆ ಎಂದು ಕೇಂದ್ರ ಕೃಷಿ ಸಚಿವಾಲಯ ಮಾಹಿತಿ ನೀಡಿದೆ.

‘ರಾಜ್ಯಗಳಿಂದ ಮಾಹಿತಿ ಪಡೆಯಲಾಗುತ್ತಿದೆ. ಈ ಬಾರಿ ಹಿಂಗಾರು ಅವಧಿಯಲ್ಲಿ ಗೋಧಿ ಬಿತ್ತನೆ ಪ್ರಮಾಣದಲ್ಲಿ ಇಳಿಕೆ ಆಗುವುದಿಲ್ಲ’ ಎಂದು ಕೃಷಿ ಕಾರ್ಯದರ್ಶಿ ಎಸ್‌.ಕೆ. ಪಟ್ಟನಾಯಕ್‌ ತಿಳಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.