ಶುಕ್ರವಾರ, ಫೆಬ್ರವರಿ 26, 2021
28 °C

ಸಹಜ ಸ್ಥಿತಿಗೆ ಮರಳಿದ ಹೊನ್ನಾವರ ಪಟ್ಟಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಹಜ ಸ್ಥಿತಿಗೆ ಮರಳಿದ ಹೊನ್ನಾವರ ಪಟ್ಟಣ

ಹೊನ್ನಾವರ (ಉತ್ತರ ಕನ್ನಡ): ಹಿಂದೂ ಹಾಗೂ ಮುಸ್ಲಿಮರ ನಡುವಿನ ಗಲಭೆಯಿಂದ ತತ್ತರಿಸಿದ್ದ ಪಟ್ಟಣವು ಭಾನುವಾರ ಸಹಜ ಸ್ಥಿತಿಗೆ ಮರಳಿದೆ.

ನಾಲ್ಕೈದು ದಿನಗಳಿಂದ ಪಟ್ಟಣದಲ್ಲಿ ಅಘೋಷಿತ ಬಂದ್ ವಾತಾವರಣ ಸೃಷ್ಟಿಯಾಗಿತ್ತು. ಭಾನುವಾರ ಕೆಲವು ಅಂಗಡಿ, ಹೋಟೆಲ್‌ಗಳು ತೆರೆದಿದ್ದವು. ದಿನಸಿ ಹಾಗೂ ತರಕಾರಿ ಸ್ವಲ್ಪ ಮಟ್ಟಿಗೆ ಲಭ್ಯವಾಗಿದ್ದರಿಂದ ಸಾರ್ವಜನಿಕರು ಕೊಂಚ ನಿರಾಳರಾದರು.

ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದು, ಪಟ್ಟಣದ ಹೊರವಲಯ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಗಸ್ತು ಮುಂದುವರಿದಿದೆ. ಸೋಮವಾರದಿಂದ ಶಾಲಾ–ಕಾಲೇಜುಗಳು ಪುನರಾರಂಭವಾಗಲಿವೆ ಎಂದು ಜಿಲ್ಲಾಧಿಕಾರಿ ಎಸ್‌.ಎಸ್. ನಕುಲ ತಿಳಿಸಿದರು.

ಕಠಿಣ ಎಚ್ಚರಿಕೆ: ಹಿರಿಯ ನಾಗರಿಕರೊಂದಿಗೆ ಸಭೆ ನಡೆಸಿದ ಜಿಲ್ಲಾಧಿಕಾರಿ, ‘ತಾಲ್ಲೂಕಿನಲ್ಲಿ ಇತ್ತೀಚೆಗೆ ನಡೆದಿರುವ ಅಹಿತಕರ ಘಟನೆಗಳಿಗೆ ಸಂಬಂಧಿಸಿದ ಚಿತ್ರಗಳನ್ನು ವಾಟ್ಸ್‌ ಆ್ಯಪ್‌, ಫೇಸ್‌ಬುಕ್‌ನಲ್ಲಿ ಹಾಕಿ ಸುಳ್ಳು ಮಾಹಿತಿ ಹಬ್ಬಿಸಿ, ಕೋಮು ಪ್ರಚೋದನೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಸಿದರು.

ಜಿಲ್ಲೆಯಲ್ಲಿ ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವ ಕೇಬಲ್ ವಾಹಿನಿಗಳ ಮಾಲೀಕರಿಗೆ ಕಾರಣ ಕೇಳಿ ನೋಟಿಸ್‌ ನೀಡಲಾಗಿದೆ ಎಂದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.