ಗುರುವಾರ , ಫೆಬ್ರವರಿ 25, 2021
29 °C

ಫೆಬ್ರುವರಿಯಲ್ಲಿ ಅಭ್ಯರ್ಥಿಗಳ ಪಟ್ಟಿ: ಮುಖ್ಯಮಂತ್ರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಫೆಬ್ರುವರಿಯಲ್ಲಿ ಅಭ್ಯರ್ಥಿಗಳ ಪಟ್ಟಿ: ಮುಖ್ಯಮಂತ್ರಿ

ಮಧುಗಿರಿ: ಪಕ್ಷದಲ್ಲಿ ಟಿಕೆಟ್ ಆಕಾಂಕ್ಷಿಗಳು ಹೆಚ್ಚಿರುವುದರಿಂದ ಅಭ್ಯರ್ಥಿಗಳ ಪಟ್ಟಿಯನ್ನು ಫೆಬ್ರುವರಿಯಲ್ಲಿ ಅಂತಿಮಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಪಟ್ಟಣದಲ್ಲಿ ಭಾನುವಾರ ಮಾತನಾಡಿದ ಅವರು, ‘ಪತ್ರಕರ್ತ ರವಿ ಬೆಳೆಗೆರೆ ಬಂಧನದಲ್ಲಿ ಸರ್ಕಾರದ ಪಾತ್ರವಿಲ್ಲ. ಕಾನೂನು ಪ್ರಕಾರ ಪೊಲೀಸ್ ಅಧಿಕಾರಿಗಳು ಸಾಕ್ಷ್ಯ ಸಂಗ್ರಹಿಸಿ ಕ್ರಮ ತೆಗೆದುಕೊಂಡಿದ್ದಾರೆ’ ಎಂದರು.

ಕಾಂಗ್ರೆಸ್ ಶಾಸಕರಿರುವ ಕ್ಷೇತ್ರಗಳಿಗೆ ಸಿದ್ದರಾಮಯ್ಯ, ಸೋತಿರುವ ಕ್ಷೇತ್ರಗಳಿಗೆ ಪರಮೇಶ್ವರ್ ಭೇಟಿ ನೀಡುತ್ತಿದ್ದಾರೆ ಎಂಬ ಕುಮಾರಸ್ವಾಮಿ ಟೀಕೆಗೆ ಪ್ರತಿಕ್ರಿಯಿಸಿದ ಅವರು ‘ಎಲ್ಲ ಕ್ಷೇತ್ರಗಳಿಗೂ ಭೇಟಿ ನೀಡುತ್ತೇನೆ. ಪರಮೇಶ್ವರ್‌ ಕ್ಷೇತ್ರಕ್ಕೂ ಭೇಟಿ ನೀಡುತ್ತೇನೆ’ ಎಂದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.