ಗುರುವಾರ , ಮಾರ್ಚ್ 4, 2021
19 °C

‘ಚಿಗುರು’ಗೆ ಹತ್ತು ವರ್ಷ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

‘ಚಿಗುರು’ಗೆ ಹತ್ತು ವರ್ಷ

ಬೆಂಗಳೂರು: ಯೂತ್ ಫಾರ್ ಸೇವಾ ಸಂಸ್ಥೆಯ ‘ಚಿಗುರು’ ಕಾರ್ಯಕ್ರಮವು ಹತ್ತು ವರ್ಷ ಪೂರೈಸಿದ ಪ್ರಯುಕ್ತ ನಗರದಲ್ಲಿ ಭಾನುವಾರ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

ನಗರದ 70 ಶಾಲೆಗಳ ಹಾಗೂ ಅನಾಥಾಶ್ರಮಗಳ 2,000 ವಿದ್ಯಾರ್ಥಿಗಳು ನೃತ್ಯ, ರಸಪ್ರಶ್ನೆ, ಸಮೂಹಗಾಯನ, ಯೋಗ, ರಂಗೋಲಿ ಹಾಗೂ ಏಕಪಾತ್ರಾಭಿನಯ ಸ್ಪರ್ಧೆಗಳಲ್ಲಿ ಭಾಗಿಯಾಗಿದ್ದರು.

ಡೆಲ್ ಕಂಪೆನಿಯ ಅಧ್ಯಕ್ಷ ಅಲೋಕ್ ಓರಿಯಾ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಐಟಿ ಕಂಪನಿಗಳ ಉದ್ಯೋಗಿಗಳು ಸ್ವಯಂಸೇವಕರಾಗಿ ಪಾಲ್ಗೊಂಡರು.

ಮಕ್ಕಳಲ್ಲಿ ಅಡಗಿರುವ ಅಂತರ್ಗತ ಕಲೆಯನ್ನು ಒರೆಗಚ್ಚಿ, ಅವರ ಆತ್ಮವಿಶ್ವಾಸ ವೃದ್ಧಿಸಲು ನೆರವಾಗುವ ಇಂತಹ ಕಾರ್ಯಕ್ರಮಗಳು ಹೆಚ್ಚಾಗಿ ನಡೆಯಬೇಕು ಎಂದು ಯೂತ್ ಫಾರ್ ಸೇವಾ ಸಂಸ್ಥೆಯ ರಾಷ್ಟ್ರೀಯ ಅಧ್ಯಕ್ಷ ಡಿ.ಎಂ.ಕಿರಣ್ ಹೇಳಿದರು.

ಮಕ್ಕಳ ಸಮಗ್ರ ಅಭಿವೃದ್ಧಿಗೆ ಅನುಕೂಲವಾಗಲೆಂದು ಹತ್ತು ವರ್ಷಗಳಿಂದ ಈ ಕಾರ್ಯಕ್ರಮವನ್ನು ನಡೆಸಿಕೊಂಡು ಬಂದಿದ್ದೇವೆ. ಪ್ರತಿ ವರ್ಷ 25,000 ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಾರೆ. ಬೆಂಗಳೂರು, ಮೈಸೂರು, ಶಿರಸಿ, ಹುಬ್ಬಳ್ಳಿ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಕಾರ್ಯಕ್ರಮ ನಡೆಯುತ್ತಿವೆ ಎಂದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.