ಮೋದಿ ಮತ್ತು ರಾಹುಲ್ ಗಾಂಧಿ ರೋಡ್ ಶೋಗೆ ಅನುಮತಿ ನಿರಾಕರಿಸಿದ ಪೊಲೀಸ್

ಅಹಮದಾಬಾದ್: ಗುಜರಾತ್ ವಿಧಾನಸಭಾ ಚುನಾವಣೆಗೆ ಸಂಬಂಧಿಸಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಬುಧವಾರ ಅಹಮದಾಬಾದ್‌ನಲ್ಲಿ ನಡೆಸಲು ತೀರ್ಮಾನಿಸಿದ್ದ ರೋಡ್ ಶೋಗೆ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ.
ಪ್ರಧಾನಿ ಮೋದಿ ಮತ್ತು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರಿಗೆ ರೋಡ್ ಶೋ ನಡೆಸಲು ಅನುಮತಿ ನೀಡಬೇಕೆಂದು ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷ ಪೊಲೀಸರಲ್ಲಿ ಅನುಮತಿ ಕೋರಿತ್ತು.
ಇದಕ್ಕೆ ಪ್ರತಿಕ್ರಿಯಿಸಿರುವ ಪೊಲೀಸ್ ರೋಡ್ ಶೋ ನಡೆಸುವುದರಿಂದ ಟ್ರಾಫಿಕ್ ಸಮಸ್ಯೆ, ಸಾರ್ವಜನಿಕರಿಗೆ ತೊಂದರೆ ಆಗುತ್ತದೆ. ಮಾತ್ರವಲ್ಲದೆ ಭದ್ರತೆ, ಕಾನೂನು ಮತ್ತು ಆದೇಶಗಳನ್ನು ಪರಿಗಣಿಸಿ ರೋಡ್ ಶೋಗೆ ಅನುಮತಿ ನಿರಾಕರಿಸಲಾಗಿದೆ ಎಂದು ಹೇಳಿದೆ.
ಡಿಸೆಂಬರ್ 12ರಂದು ರೋಡ್‍ಶೋ ನಡೆಸಲು ಕಾಂಗ್ರೆಸ್ ಮತ್ತು ಬಿಜೆಪಿ ಅನುಮತಿ ಕೋರಿದ್ದವು.
ರೋಡ್‍ಶೋಗೆ ಅನುಮತಿ ನಿರಾಕರಿಸಿದ್ದೇವೆ ಎಂದು ಅಹಮದಾಬಾದ್ ಪೊಲೀಸ್ ಕಮಿಷನರ್ ಎ.ಕೆ ಸಿಂಗ್ ಹೇಳಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.