ಪರೇಶ್ ಮೇಸ್ತ ಸಾವಿನ ತನಿಖೆ ಆಗ್ರಹಿಸಿ ಪ್ರತಿಭಟನೆ: ಕಲ್ಲು ತೂರಾಟ, ಐಜಿಪಿ ಹೇಮಂತ್ ನಿಂಬಾಳ್ಕರ್ ವಾಹನಕ್ಕೆ ಬೆಂಕಿ

ಕುಮಟಾ: ಪರೇಶ್ ಮೇಸ್ತ ಅನುಮಾನಾಸ್ಪದ ಸಾವಿನ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಸೋಮವಾರ ಬಿಜೆಪಿ ಕಾರ್ಯಕರ್ತರು ನಡೆಸುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ.
ಉದ್ರಿಕ್ತ ಜನರು ಪೊಲೀಸ್ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದು, ಐಜಿಪಿ ಹೇಮಂತ್ ನಿಂಬಾಳ್ಕರ್ ಅವರ ವಾಹನಕ್ಕೆ ಬೆಂಕಿ ಹಚ್ಚಿದ್ದಾರೆ.
ಘಟನೆಯಲ್ಲಿ ಕಾರಿನ ಚಾಲಕ ಗಾಯಗೊಂಡಿದ್ದಾರೆ. ಕಲ್ಲು ತೂರಾಟ ವೇಳೆ ಪಿಎಸ್ಐ ಇ.ಸಿ.ಸಂಪತ್ ಕುಮಾರ್ ಅವರಿಗೂ ಪೆಟ್ಟಾಗಿದೆ.
ಉದ್ರಿಕ್ತ ಜನರನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದರು. ಅಲ್ಲದೇ ಅಶ್ರುವಾಯು ಸಿಡಿಸಿದರು.
ಅಂಗಡಿ ಮುಂಗಟ್ಟು ಬಂದ್ ಆಗಿವೆ. ಪಟ್ಟಣದ ಗಿಬ್ಸ್ ವೃತ್ತದಲ್ಲಿ ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
25 ಮಂದಿ ವಶ: ಘಟನೆಗೆ ಸಂಬಂಧಿಸಿದಂತೆ ಪೊಲೀಸರು 25 ಮಂದಿಯನ್ನು ಹಾಗೂ ಹಲವು ಬೈಕ್ ಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.