ಗುರುವಾರ , ಮಾರ್ಚ್ 4, 2021
18 °C

ನಟ ಸುದೀಪ್‌–ಮುಖ್ಯಮಂತ್ರಿ ಭೇಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನಟ ಸುದೀಪ್‌–ಮುಖ್ಯಮಂತ್ರಿ ಭೇಟಿ

ಬೆಂಗಳೂರು: ನಟ ಸುದೀಪ್‌ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಸುಮಾರು 45 ನಿಮಿಷ ಚರ್ಚೆ ನಡೆಸಿ, ಅಭಿಮಾನ್‌ ಸ್ಟುಡಿಯೊ ಜಾಗವನ್ನು ಡಾ.ವಿಷ್ಣು ಪುಣ್ಯಭೂಮಿ ಎಂದು ಘೋಷಿಸುವಂತೆ ಮನವಿ ಮಾಡಿದರು.

ನಟಿ ಭಾರತಿ ಅವರ ಆಸೆಯಂತೆ ಸ್ಮಾರಕವನ್ನು ಮೈಸೂರಿನಲ್ಲಿಯೇ ನಿರ್ಮಾಣ ಮಾಡಿ. ಆದರೆ, ಅಂತ್ಯ ಸಂಸ್ಕಾರ ನಡೆದ ಅಭಿಮಾನ್ ಸ್ಟುಡಿಯೋದ ಜಾಗವನ್ನು ಡಾ.ವಿಷ್ಣು ಪುಣ್ಯಭೂಮಿ ಎಂದು ಘೋಷಿಸಿ ಅಭಿವೃದ್ಧಿಪಡಿಸುವಂತೆ ಸುದೀಪ್‌ ಮನವಿ ಮಾಡಿದರು.

ಸುದೀಪ್ ಅವರ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಾ.ವಿಷ್ಣುವರ್ಧನ್ ಸ್ಮಾರಕಕ್ಕೆ ಆದ್ಯತೆ ಮೇರೆಗೆ ತಾರ್ಕಿಕ ಅಂತ್ಯ ಒದಗಿಸುವುದಾಗಿ ಭರವಸೆ ನೀಡಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.