ಗುರುವಾರ , ಮಾರ್ಚ್ 4, 2021
29 °C

‘ರೈತರ ಹಿತ ಕಾಯದ ಸರ್ಕಾರಗಳು’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

‘ರೈತರ ಹಿತ ಕಾಯದ ಸರ್ಕಾರಗಳು’

ರಿಪ್ಪನ್‌ಪೇಟೆ: ‘ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ರೈತರ ಹಿತ ಕಾಪಾಡುವಲ್ಲಿ ಹಾಗೂ ಜನಪರ ಆಡಳಿತ ನೀಡುವಲ್ಲಿ ಸಂಪೂರ್ಣ ವಿಫಲವಾಗಿವೆ’ ಎಂದು ಶಾಸಕ ಮಧು ಬಂಗಾರಪ್ಪ ಆರೋಪಿಸಿದರು.

ನಾಗರಹಳ್ಳಿಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಆರ್‌.ಎಂ.ಮಂಜುನಾಥ ಗೌಡ ಹಾಗೂ ತಾಲ್ಲೂಕು ಪಂಚಾಯ್ತಿ ಸದಸ್ಯ ಆಲುವಳ್ಳಿ ವೀರೇಶ ಅವರ ಅಭಿಮಾನಿಗಳ ಸಭೆ ಉದ್ಘಾಟಿಸಿ ಅವರು ಮಾತನಾಡಿರು.

‘ಜನಸಾಮಾನ್ಯರ ಬದುಕಿನ ಅರಿವು ಹಾಗೂ ರೈತ ಸಮುದಾಯದ ಸಂಕಷ್ಟದ ಅರಿವು ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಇದೆ. ರಾಜ್ಯದ ಸಮಗ್ರ ಅಭಿವೃದ್ಧಿ ಹಾಗೂ ಬಡತನ ನಿರ್ಮೂಲನೆ ಜೆಡಿಎಸ್‌ನಿಂದ ಮಾತ್ರ ಸಾಧ್ಯ. ಮುಂಬರುವ ದಿನಗಳಲ್ಲಿ ಪಕ್ಷ ಅಧಿಕಾರಕ್ಕೆ ಬರುವುದು ಖಚಿತ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮುಂದಿನ ಚುನಾವಣೆಯಲ್ಲಿ ತೀರ್ಥಹಳ್ಳಿ ಕ್ಷೇತ್ರದಿಂದ ಜೆಡಿಎಸ್‌ ಅಭ್ಯರ್ಥಿಯಾಗಿ ಆರ್.ಎಂ.ಮಂಜುನಾಥ ಗೌಡ ಅವರನ್ನು ಪಕ್ಷ ಕಣಕ್ಕಿಳಿಸಲಿದೆ ಎಂದು ತಿಳಿಸಿದರು.

‘ಸಣ್ಣ ನೀರಾವರಿ ಸಚಿವರಾಗಿ ಕ್ಷೇತ್ರದ ಬಗ್ಗೆ ಗಮನಹರಿಸದ ಕುಮಾರ್‌ ಬಂಗಾರಪ್ಪ ಈಗ ಬಿಜೆಪಿ ಸೇರಿ ರಾಜಕೀಯ ಅಸ್ತಿತ್ವಕ್ಕೆ ಹೆಣಗುತ್ತಿರುವುದು ನಾಚೀಕೆಗೇಡಿನ ಸಂಗತಿ’ ಎಂದು ಟೀಕಿಸಿದರು.

ಮಂಜುನಾಥಗೌಡ ಮಾತನಾಡಿ, ‘ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ನನ್ನ ಏಳ್ಗೆ ಸಹಿಸದೇ ಸುಳ್ಳು ಆರೋಪಗಳ ಮೂಲಕ ಜೈಲಿಗೆ ಕಳಿಸಿದ್ದವು. ಆದರೆ, ಆರೋಪ ಮುಕ್ತನಾಗಿ ಮುಂದಿನ ಚುನಾವಣೆಗೆ ಜೆಡಿಎಸ್‌ನಿಂದ ಸ್ಪರ್ಧಿಸುವುದು ಖಚಿತ’ ಎಂದರು.

ಅಧ್ಯಕ್ಷತೆ ವಹಿಸಿದ್ದ ವೀರೇಶ ಆಲುವಳ್ಳಿ ಮಾತನಾಡಿ, ತೀರ್ಥಹಳ್ಳಿ ಕ್ಷೇತ್ರದಲ್ಲಿ ಜನಪರ ಆಡಳಿತ ನೀಡುವಲ್ಲಿ ಕಿಮ್ಮನೆ ರತ್ನಾಕರ ಹಾಗೂ ಆರಗ ಜ್ಞಾನೇಂದ್ರ ಸಂಪೂರ್ಣ ವಿಫಲರಾಗಿದ್ದಾರೆ’ ಎಂದು ಟೀಕಿಸಿದರು.

ವಾಟಗೋಡು ಸುರೇಶ, ಎಂ.ಎಂ.ಪರಮೇಶ, ಅಮೀರ್ ಹಂಜ, ದರಲಗೋಡು ನಾಗೇಂದ್ರ ಜೋಯ್ಸ್, ಶ್ರೀಪತಿರಾವ್, ಎಂ.ವಿ.ಜಯರಾಮ, ರಾಘವೇಂದ್ರ , ಗೇರುಗಲ್ಲು ಸತೀಶ ಭಟ್ಟ, ಸುಮತಿ ಆರ್.ಪೂಜಾರ್, ಧರ್ಮೇಶ , ಪ್ರವೀಣ, ರಾಜೇಶ್ ಹಾಜರಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.