ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಜರಾತ್‌ನಲ್ಲಿ ಸೋಲುವ ಭೀತಿಯಿಂದ ಸುಳ್ಳು ಹಬ್ಬುತ್ತಿರುವ ಮೋದಿ: ಮನಮೋಹನ್‌ ಸಿಂಗ್‌

Last Updated 11 ಡಿಸೆಂಬರ್ 2017, 12:36 IST
ಅಕ್ಷರ ಗಾತ್ರ

ನವದೆಹಲಿ: ‘ಗುಜರಾತ್‌ ಚುನಾವಣೆಯಲ್ಲಿ ಹೇಗಾದರೂ ಮಾಡಿ ಗೆಲುವು ಸಾಧಿಸಬೇಕೆಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಇಲ್ಲಸಲ್ಲದ ಸುಳ್ಳು ಹಬ್ಬಿಸುತ್ತಿದ್ದಾರೆ’ ಎಂದು ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಹೇಳಿದ್ದಾರೆ.

‘ಕಾಂಗ್ರೆಸ್‌ ಮುಖಂಡರು ಮಣಿಶಂಕರ್‌ ಅಯ್ಯರ್‌ ಅವರ ಮನೆಯಲ್ಲಿ ಪಾಕಿಸ್ತಾನದ ನಾಯಕರೊಂದಿಗೆ ಸಭೆ ನಡೆಸಿರುವ ವರದಿಯಾಗಿದೆ. ಈ ಬಗ್ಗೆ ಕಾಂಗ್ರೆಸ್‌ ಸ್ಪಷ್ಟನೆ ನೀಡಬೇಕು’ ಎಂದು ಮೋದಿ ಭಾನುವಾರ ಹೇಳಿದ್ದರು.

ಇದಕ್ಕೆ ಪ್ರತಿಕ್ರಿಯಿಸಿರುವ ಸಿಂಗ್, ‘ರಾಜಕೀಯ ಲಾಭಕ್ಕಾಗಿ ಮೋದಿ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಈ ಬಗ್ಗೆ ಮೋದಿ ದೇಶದ ಜನರ ಕ್ಷಮೆ ಕೇಳಬೇಕು’ ಎಂದು ಆಗ್ರಹಿಸಿದ್ದಾರೆ.

‘ಗುಜರಾತ್‌ನಲ್ಲಿ ಬಿಜೆಪಿ ಸೋಲುವ ಭೀತಿಯಲ್ಲಿರುವ ಪ್ರಧಾನಿ ಇಲ್ಲಸಲ್ಲದ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದು ಅವರ ಹುದ್ದೆಗೆ ಘನತೆ ತರುವಂಥದ್ದಲ್ಲ’ ಎಂದು ಸಿಂಗ್‌ ತಿಳಿಸಿದ್ದಾರೆ.

‘ಮೋದಿ ತಮ್ಮ ಈ ಹೇಳಿಕೆ ಬಗ್ಗೆ ದೇಶದ ಜನರ ಕ್ಷಮೆ ಕೇಳುತ್ತಾರೆ ಎಂಬ ವಿಶ್ವಾಸವಿದೆ. ಈ ಮೂಲಕ ಅವರು ತಮ್ಮ ಹುದ್ದೆ ಹಾಗೂ ಪ್ರಧಾನಮಂತ್ರಿ ಕಾರ್ಯಾಲಯದ ಘನತೆಯನ್ನು ಕಾಪಾಡುತ್ತಾರೆ ಎಂದು ನಂಬಿದ್ದೇನೆ’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT