ಗುರುವಾರ , ಮಾರ್ಚ್ 4, 2021
18 °C
ಶಂಕಿತ ವ್ಯಕ್ತಿ ಪೊಲೀಸರ ವಶಕ್ಕೆ

ನ್ಯೂಯಾರ್ಕ್‌ನ ಟೈಮ್ಸ್‌ ಚೌಕದ ಸಮೀಪ ಸ್ಫೋಟ

ಏಜೆನ್ಸಿಸ್‌ Updated:

ಅಕ್ಷರ ಗಾತ್ರ : | |

ನ್ಯೂಯಾರ್ಕ್‌ನ ಟೈಮ್ಸ್‌ ಚೌಕದ ಸಮೀಪ ಸ್ಫೋಟ

ನ್ಯೂಯಾರ್ಕ್‌: ಅಮೆರಿಕದ ನ್ಯೂಯಾರ್ಕ್‌ನ ಟೈಮ್ಸ್‌ ಚೌಕದ ಸಮೀಪ ಸೋಮವಾರ ಸ್ಫೋಟ ಸಂಭವಿಸಿದೆ.

ಸ್ಫೋಟದಲ್ಲಿ ಹಲವರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ‘ಸ್ಫೋಟ ಸಂಭವಿಸಿದ ಸ್ಥಳದಿಂದ ಶಂಕಿತನೊಬ್ಬನನ್ನು ವಶಕ್ಕೆ ಪಡೆಯಲಾಗಿದೆ. ಆತನನ್ನು ಬಿಟ್ಟರೆ ಬೇರೆ ಯಾರಿಗೂ ಗಾಯವಾಗಿಲ್ಲ’ ಎಂದು ಪೊಲೀಸರು ತಿಳಿಸಿದ್ದಾರೆ.

‘ಸುರಂಗ ಮಾರ್ಗದಲ್ಲಿ ಮತ್ತೊಂದು ಸ್ಫೋಟಕ ಪತ್ತೆಯಾಗಿದೆ. ಪೋರ್ಟ್‌ ಅಥಾರಿಟಿ ಮತ್ತು ಟೈಮ್ಸ್‌ ಚೌಕಕ್ಕೆ ಸಂಪರ್ಕ ಕಲ್ಪಿಸುವ ಸುರಂಗ ಮಾರ್ಗದ ಬದಲು ಬೇರೆ ಮಾರ್ಗ ಬಳಸಿ’ ಎಂದು ಪೊಲೀಸರು ಹೇಳಿದ್ದಾರೆ.

ಘಟನೆಯಿಂದಾಗಿ ಕೆಲವು ಸುರಂಗ ಮಾರ್ಗಗಳ ರೈಲು ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.