ಶನಿವಾರ, ಮಾರ್ಚ್ 6, 2021
28 °C

ಅನುಷ್ಕಾ ಬಾಲ್‌ಗೆ ಬೋಲ್ಡ್‌ ಆದ ಕೊಹ್ಲಿ: ದಾಂಪತ್ಯಕ್ಕೆ ಕಾಲಿಟ್ಟ ಜೋಡಿ

ಪಿಟಿಐ Updated:

ಅಕ್ಷರ ಗಾತ್ರ : | |

ಅನುಷ್ಕಾ ಬಾಲ್‌ಗೆ ಬೋಲ್ಡ್‌ ಆದ ಕೊಹ್ಲಿ: ದಾಂಪತ್ಯಕ್ಕೆ ಕಾಲಿಟ್ಟ ಜೋಡಿ

ಮುಂಬೈ : ಭಾರತ ಕ್ರಿಕೆಟ್‌ ತಂಡದ ನಾಯಕ ವಿರಾಟ್‌ ಕೊಹ್ಲಿ ಮತ್ತು ನಟಿ ಅನುಷ್ಕಾ ಶರ್ಮಾ, ಸೋಮವಾರ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ವಿವಾಹವಾಗಿರುವ ವಿಷಯವನ್ನು ಕೊಹ್ಲಿ ಮತ್ತು ಅನುಷ್ಕಾ ತಮ್ಮ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಇಟಲಿಯ ಟಸ್ಕಾನ್‌ ನಗರದ ಸಮೀಪವಿರುವ ಬೊರ್ಗೊ ಫಿನೊಚಿಯೆಟಾ ರೆಸಾರ್ಟ್‌ನಲ್ಲಿ ‘ವಿರುಷ್ಕಾ’ ಮದುವೆಯಾಗಿದ್ದಾರೆ.

2013ರಲ್ಲಿ ಜಾಹೀರಾತು ಚಿತ್ರೀಕರಣವೊಂದರ ವೇಳೆ ಪರಿಚಿತರಾಗಿದ್ದ ಇವರು ಅಂದಿನಿಂದ ಪರಸ್ಪರ ಪ್ರೀತಿಸುತ್ತಿದ್ದರು. ವಿವಾಹದ ವಿಷಯವನ್ನು ರಹಸ್ಯವಾಗಿಯೇ ಇಟ್ಟಿದ್ದರು.

ಡಿಸೆಂಬರ್‌ನಲ್ಲಿ ಹಸೆಮಣೆ ಏರಲು ಈ ಜೋಡಿ ತುಂಬಾ ದಿನಗಳ ಮುಂಚೆಯೇ ತಯಾರಿ ಮಾಡಿಕೊಂಡಿತ್ತು. ಈ ಕಾರಣದಿಂದಾಗಿಯೇ ವಿರಾಟ್‌, ತವರಿನಲ್ಲಿ ಆಯೋಜನೆಯಾಗಿದ್ದ ಶ್ರೀಲಂಕಾ ವಿರುದ್ಧದ ಏಕದಿನ ಮತ್ತು ಟಿ–20 ಕ್ರಿಕೆಟ್‌ ಸರಣಿಗಳಿಂದ ವಿಶ್ರಾಂತಿ ಪಡೆದಿದ್ದರು.

ನವ ಜೋಡಿಗೆ ಸಾಮಾಜಿಕ ಜಾಲತಾಣಗಳಲ್ಲಿ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ.

ಮದುವೆ ಸಮಾರಂಭದಲ್ಲಿ ಎರಡು ಕುಟುಂಬದ ಆಪ್ತರು ಮತ್ತು ಸ್ನೇಹಿತರು ಮಾತ್ರ ಭಾಗವಹಿಸಿದ್ದರು. ಮುಂದಿನ ವಾರ ಮುಂಬೈನಲ್ಲಿ ಅದ್ಧೂರಿ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ.

ಮದುವೆ ಫೋಟೊಗಳನ್ನು ವಿರಾಟ್‌ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.