ಶನಿವಾರ, ಮಾರ್ಚ್ 6, 2021
28 °C

ಮತದಾರರ ಹೆಸರಿಗೆ ಆಧಾರ್‌ ಜೋಡಣೆ ಜೆಡಿಎಸ್‌ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮತದಾರರ ಹೆಸರಿಗೆ ಆಧಾರ್‌ ಜೋಡಣೆ ಜೆಡಿಎಸ್‌ ಒತ್ತಾಯ

ಬೆಂಗಳೂರು: ಮತದಾರರ ಪಟ್ಟಿಯಲ್ಲಿರುವ ಮತದಾರರ ಹೆಸರಿಗೆ ಆಧಾರ್‌ ಜೋಡಣೆ ಮಾಡಬೇಕೆಂದು  ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ಕೇಂದ್ರ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ.

ಆಧಾರ್‌ ಜೋಡಣೆ ಮಾಡುವುದರಿಂದ ಒಬ್ಬ ಮತದಾರ ಒಂದಕ್ಕಿಂತ ಹೆಚ್ಚು ವಿಧಾನಸಭಾ ಕ್ಷೇತ್ರದಲ್ಲಿ ಅಥವಾ ಲೋಕಸಭಾ ಕ್ಷೇತ್ರದಲ್ಲಿ ಹೆಸರು ನೋಂದಾಯಿಸುವುದನ್ನು ತಡೆಯಬಹುದು ಎಂದು ಹೇಳಿದ್ದಾರೆ.

ಚುನಾವಣೆಗಳನ್ನು ಪಾರದರ್ಶಕವಾಗಿ ನಡೆಸುವುದು ಮತ್ತು ಅಕ್ರಮಗಳನ್ನು ತಡೆಯಲು ಮತದಾರರ ಹೆಸರಿಗೆ ಆಧಾರ್‌ ಜೋಡಣೆ ಮಾಡಬೇಕು. ರಾಜ್ಯದಲ್ಲಿ ಮುಂದಿನ ವರ್ಷ ನಡೆಯುವ ವಿಧಾನಸಭಾ ಚುನಾವಣೆಯಲ್ಲೇ ಈ ವ್ಯವಸ್ಥೆ ಜಾರಿಗೆ ತರಬೇಕು ಎಂದು ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.