ಬೆಂಗಳೂರು: ಹಿರಿಯ ಕ್ರಿಕೆಟಿಗ ಆಶಿಶ್ ನೆಹ್ರಾ, ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ (ಐಪಿಎಲ್) ಆಡುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡಕ್ಕೆ ಸಲಹೆಗಾರರಾಗಿ ನೇಮಕವಾಗುವ ಸಾಧ್ಯತೆ ಇದೆ.

ನೆಹ್ರಾ ಅವರೊಂದಿಗೆ ಒಪ್ಪಂದ ಮಾಡಿಕೊಳ್ಳಲು ಆರ್ಸಿಬಿ ಫ್ರಾಂಚೈಸ್ ಮುಂದಾಗಿದೆ ಎಂದು ಹೇಳಲಾಗಿದೆ.

ಎಡಗೈ ವೇಗದ ಬೌಲರ್ ನೆಹ್ರಾ ಹೋದ ತಿಂಗಳು ಕ್ರಿಕೆಟ್ ಬದುಕಿಗೆ ವಿದಾಯ ಹೇಳಿದ್ದರು. ಬಳಿಕ ನಡೆದ ಭಾರತ ಮತ್ತು ಶ್ರೀಲಂಕಾ ನಡುವಣ ಟೆಸ್ಟ್ ಸರಣಿಯ ವೇಳೆ ಅವರು ವೀಕ್ಷಕ ವಿವರಣೆಗಾರರಾಗಿ ಕೆಲಸ ಮಾಡಿದ್ದರು. ವಿರಾಟ್ ಕೊಹ್ಲಿ ಸಾರಥ್ಯದ ಆರ್ಸಿಬಿ ತಂಡ ಐಪಿಎಲ್ನಲ್ಲಿ ಒಮ್ಮೆಯೂ ಚಾಂಪಿಯನ್ ಆಗಿಲ್ಲ.

ಈ ಮೊದಲು ಆರ್ಸಿಬಿ ತಂಡದ ಸಹಾಯಕ ಕೋಚ್ ಆಗಿದ್ದ ಭರತ್ ಅರುಣ್, ಜುಲೈನಲ್ಲಿ ಭಾರತ ಕ್ರಿಕೆಟ್ ತಂಡದ ಬೌಲಿಂಗ್ ಕೋಚ್ ಆಗಿ ನೇಮಕವಾಗಿದ್ದರು. ಬೌಲಿಂಗ್ ಕೋಚ್ ಆಗಿದ್ದ ಅಲನ್ ಡೊನಾಲ್ಡ್ , ಈ ಹುದ್ದೆಯನ್ನು ತೊರೆದಿದ್ದರು. ಹೀಗಾಗಿ ನೆಹ್ರಾ ಅವರನ್ನು ಸೆಳೆದುಕೊಳ್ಳಲು ಆರ್ಸಿಬಿ ಮುಂದಾಗಿದೆ ಎಂಬ ಮಾತುಗಳು ಕೇಳಿಬಂದಿವೆ.

38 ವರ್ಷದ ನೆಹ್ರಾ, ಭಾರತ ಕಂಡ ಶ್ರೇಷ್ಠ ಬೌಲರ್ಗಳಲ್ಲಿ ಒಬ್ಬರೆನಿಸಿದ್ದಾರೆ. 17 ಟೆಸ್ಟ್ ಆಡಿರುವ ಅವರು 44 ವಿಕೆಟ್ ಉರುಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.