ಶುಕ್ರವಾರ, ಮಾರ್ಚ್ 5, 2021
25 °C

ರಾಜಕೀಯಕ್ಕೆ ದುರ್ಬಳಕೆ: ಸಿ.ಎಂ.ಟೀಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಜಕೀಯಕ್ಕೆ ದುರ್ಬಳಕೆ: ಸಿ.ಎಂ.ಟೀಕೆ

ಬೆಂಗಳೂರು: ‘ಹೊನ್ನಾವರದಲ್ಲಿ ನಡೆದ ವ್ಯಕ್ತಿಯೊಬ್ಬರ ಸಾವನ್ನು ಬಿಜೆಪಿ ರಾಜಕೀಯಕ್ಕಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು.

ಸೋಮವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಯಾರ ಜೀವಕ್ಕೂ ಹಾನಿಯಾಗಬಾರದು. ಆದರೆ, ಹೊನ್ನಾವರದಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಇದಕ್ಕೆ ಕಾರಣ ಏನೆಂಬ ಬಗ್ಗೆ ತನಿಖೆ ನಡೆಯುತ್ತಿದೆ. ಅಲ್ಲದೆ, ಮರಣೋತ್ತರ ವರದಿ ಇನ್ನೂ ಬಂದಿಲ್ಲ. ಹೀಗಿರುವಾಗ ಅದು ಕೊಲೆ ಎಂದು ತೀರ್ಮಾನಿಸಿ ಬಿಜೆಪಿ ಅಲ್ಲಿನ ಜನರ ಭಾವನೆಗಳನ್ನು ಕೆರಳಿಸುವ ಪ್ರಯತ್ನ ಮಾಡುತ್ತಿದೆ. ಚುನಾವಣೆ ಸಮೀಪಿಸುತ್ತಿರುವುದರಿಂದ ರಾಜಕೀಯಕ್ಕಾಗಿ ಇಂತಹ ವಿಷಯಗಳನ್ನು ಬಳಸಿಕೊಳ್ಳುತ್ತಿದೆ’ ಎಂದು ಆರೋಪಿಸಿದರು.

‘ಯಡಿಯೂರಪ್ಪ ನಿಮ್ಮನ್ನು ಬಚ್ಚಾ ಎಂದು ಕರೆದಿದ್ದಾರಲ್ಲ’ ಎಂಬ ಪ್ರಶ್ನೆಗೆ, ‘ಅವರಿಗೆ ಸಾರ್ವಜನಿಕವಾಗಿ ಮಾತನಾಡುವುದೇ ಗೊತ್ತಿಲ್ಲ. ಅಧಿಕಾರಕ್ಕೆ ಬರುವುದಿಲ್ಲ ಎಂಬುದು ಖಾತ್ರಿಯಾಗಿ ಹತಾಶ ಮನಸ್ಥಿತಿಯಿಂದ ಇಂತಹ ಮಾತುಗಳನ್ನಾಡುತ್ತಿದ್ದಾರೆ. ನಾನು 40 ವರ್ಷಗಳಿಂದ ರಾಜಕೀಯದಲ್ಲಿದ್ದೇನೆ. ಮೋದಿ, ಯಡಿಯೂರಪ್ಪ ಅಂತಹವರನ್ನು ಅನುಸರಿಸುವುದಿಲ್ಲ. ನನ್ನದೇ ಹಾದಿಯಲ್ಲಿ ನಡೆಯುತ್ತಿದ್ದೇನೆ’ ಎಂದು ತಿರುಗೇಟು ನೀಡಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.