ಗುರುವಾರ , ಫೆಬ್ರವರಿ 25, 2021
23 °C

ಸಿದ್ದರಾಮಯ್ಯ ತಲೆತಿರುಕ: ಬಿಎಸ್‌ವೈ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಿದ್ದರಾಮಯ್ಯ ತಲೆತಿರುಕ: ಬಿಎಸ್‌ವೈ

ಕಲಬುರ್ಗಿ: ‘ಮುಖ್ಯಮಂತ್ರಿ ಸಿದ್ದರಾಮಯ್ಯ ತಲೆತಿರುಕ. ಅವನ ಮಾತಿಗೆ ನಾನೇನೂ ಹೇಳಲ್ಲ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಸಿಟ್ಟಿನಿಂದಲೇ ಹೇಳಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ‘ಬಿಜೆಪಿಯ ನವ ಕರ್ನಾಟಕ ಪರಿವರ್ತನಾ ಯಾತ್ರೆ ವಿಫಲವಾಗಿದೆ’ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಟೀಕೆಗೆ ಪ್ರತಿಕ್ರಿಯಿಸಿದ ಅವರು, ‘ಕಲಬುರ್ಗಿ ಜಿಲ್ಲೆಯೂ ಸೇರಿದಂತೆ ಎಲ್ಲೆಡೆ ಪರಿವರ್ತನಾ ಯಾತ್ರೆ ಯಶಸ್ವಿಯಾಗಿದೆ. ಸಿದ್ದರಾಮಯ್ಯಗೆ ತಲೆ ಸರಿ ಇಲ್ಲ. ಅದಕ್ಕೆ ಈ ರೀತಿ ಮಾತನಾಡಿದ್ದಾನೆ’ ಎಂದು ಏಕವಚನದಲ್ಲೇ ಕಿಡಿಕಾರಿದರು.

‘ಯಾತ್ರೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುತ್ತಿದ್ದಾರೆ. ಯುವಕರು ಹುಮ್ಮಸಿನಿಂದ ಭಾಗಿಯಾಗುತ್ತಿದ್ದಾರೆ. ಇದನ್ನು ಸಹಿಸಿಕೊಳ್ಳಲು ಅವರಿಗೆ ಆಗುತ್ತಿಲ್ಲ. ಯಾತ್ರೆಯಲ್ಲಿ ಭಾಗವಹಿಸುವ ಯುವಕರ ಮೇಲೆ ಪ್ರಕರಣ ದಾಖಲಿಸುವ ಮೂಲಕ ಮುಖ್ಯಮಂತ್ರಿ ತುಘಲಕ್‌ ದರ್ಬಾರ್ ನಡೆಸುತ್ತಿದ್ದಾನೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಮೂರು ತಿಂಗಳಲ್ಲಿ ಸಿದ್ದರಾಮಯ್ಯ ಅಧಿಕಾರ ಕಳೆದುಕೊಳ್ಳಲಿದ್ದಾರೆ. ಅಲ್ಲಿವರೆಗೆ ಏನು ಬೇಕಾದರೂ ಮಾಡಲಿ. ಸತ್ಯದ ಯಾತ್ರೆಯ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿಯೇ ಗೊಂದಲಗಳಿವೆ. ಸಿದ್ದರಾಮಯ್ಯ–ಪರಮೇಶ್ವರ ನಡುವೆ ತೀವ್ರ ಭಿನ್ನಾಭಿಪ್ರಾಯವಿದೆ. ಹೀಗಾಗಿ ಅದು ಸತ್ಯದ ಯಾತ್ರೆ ಹೇಗಾಗುತ್ತದೆ’ ಎಂದು ಪ್ರಶ್ನಿಸಿದರು.

‘ಸಮೀಕ್ಷೆಯ ನಂತರವೇ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಲಾಗುವುದು. ಒಬ್ಬರು ಆಕಾಂಕ್ಷಿ ಇರುವ ವಿಧಾನಸಭಾ ಕ್ಷೇತ್ರದಲ್ಲಿ ಮಾತ್ರ ಅಭ್ಯರ್ಥಿಯ ಘೋಷಣೆ ಮಾಡಲಾಗಿದೆ. ಇದು ಸಾಂಕೇತಿಕ ಘೋಷಣೆ

‘ಮಹಾಸಭಾ ನಿರ್ಣಯಕ್ಕೆ ಬದ್ಧ

ಕಲಬುರ್ಗಿ:‘ಲಿಂಗಾಯತ ಪ್ರತ್ಯೇಕ ಧರ್ಮದ ಮಾನ್ಯತೆಗೆ ಸಂಬಂಧಿಸಿದಂತೆ ಅಖಿಲ ಭಾರತ ವೀರಶೈವ ಮಹಾಸಭಾ ಕೈಗೊಳ್ಳುವ ನಿರ್ಣಯಕ್ಕೆ ಬದ್ಧರಾಗಿದ್ದೇವೆ. ಸಿದ್ಧಗಂಗಾ ಸ್ವಾಮೀಜಿ ಸೇರಿದಂತೆ ರಾಜ್ಯದ ಅನೇಕ ಹಿರಿಯ ಸ್ವಾಮೀಜಿಗಳು ನಿಲುವು ಪ್ರಕಟಿಸಿದ್ದಾರೆ. ಅವರ ನಿಲುವಿಗೆ ನಮ್ಮ ಸಹಮತವೂ ಇದೆ’ ಎಂದು ಯಡಿಯೂರಪ್ಪ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.