ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಕರ ವೇತನ ಕಡಿತಕ್ಕೆ ತಡೆ

Last Updated 12 ಡಿಸೆಂಬರ್ 2017, 19:30 IST
ಅಕ್ಷರ ಗಾತ್ರ

ಬೆಂಗಳೂರು: ವಿಶೇಷ ಭತ್ಯೆ ಪಡೆದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರಿಗೆ ವೇತನ ಕಡಿತ ಮಾಡುವ ಆದೇಶಕ್ಕೆ ತಡೆ ನೀಡಿ ಆದೇಶ ಹೊರಡಿಸಲಾಗಿದೆ.

‘2008ರ ಆ.1ಕ್ಕಿಂತ ಮುಂಚಿತವಾಗಿ ನೇಮಕವಾದ ಶಿಕ್ಷಕರ ಪೈಕಿ 7,242 ಮಂದಿಗೆ ಪ್ರತಿ ತಿಂಗಳು 4,400ರಂತೆ ₹ 8.33 ಕೋಟಿ ಪಾವತಿ ಮಾಡಲಾಗಿತ್ತು. ಅದನ್ನು ವಸೂಲಿ ಮಾಡಲು ವೇತನದಲ್ಲಿ ಕಡಿತ ಮಾಡಬೇಕು ಎಂಬ ಆದೇಶ ಹೊರಡಿಸಲಾಗಿತ್ತು.

ಈ ಬಗ್ಗೆ ಆಕ್ಷೇಪ ವ್ಯಕ್ತವಾದಾಗ ಬೆಳಗಾವಿಯಲ್ಲಿ ನಡೆದ ವಿಧಾನಮಂಡಲ ಅಧಿವೇಶನದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ವೇತನ ಕಡಿತ ಆದೇಶಕ್ಕೆ ತಡೆಹಿಡಿಯಲಾಗುವುದು ಎಂದು ಹೇಳಿಕೆ ನೀಡಿದ್ದರು.

ಆದರೂ ಕೆಲವೆಡೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಿಕ್ಷಕರ ವೇತನ ಕಡಿತ ಮಾಡಿದ್ದಾರೆ. ಈ ಸಂಬಂಧ ಸರ್ಕಾರ ಆದೇಶ ಮಾಡಿದ್ದು, ಎಲ್ಲರೂ ಅದನ್ನು ಪಾಲನೆ ಮಾಡಬೇಕು’ ಎಂದು ರಾಜ್ಯ ಪ್ರೌಢ ಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಎಚ್.ಕೆ. ಮಂಜುನಾ‌ಥ್ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT