ಸೋಮವಾರ, ಮಾರ್ಚ್ 8, 2021
18 °C

10 ಅಂಗವಿಕಲರಿಗೆ ದ್ವಿಚಕ್ರ ವಾಹನ ವಿತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

10 ಅಂಗವಿಕಲರಿಗೆ ದ್ವಿಚಕ್ರ ವಾಹನ ವಿತರಣೆ

ಬೆಂಗಳೂರು: ಶಾಸಕ ಎಸ್‌.ಮುನಿರಾಜು ಅವರು ತಮ್ಮ 59ನೇ ಹುಟ್ಟುಹಬ್ಬದ ಪ್ರಯುಕ್ತ 10 ಅಂಗವಿಕಲರಿಗೆ ದ್ವಿಚಕ್ರ ವಾಹನವನ್ನು ಕೊಡುಗೆಯಾಗಿ ನೀಡಿದರು.

ಪೀಣ್ಯದಾಸರಹಳ್ಳಿ ಸಮೀಪದ ಶೆಟ್ಟಿಹಳ್ಳಿಯಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಅವರು, ಬಡ ವ್ಯಾಪಾರಸ್ಥರಿಗೆ ತಳ್ಳುಗಾಡಿಗಳನ್ನು ಹಾಗೂ ಸುಮಾರು 60 ಅಂಧರಿಗೆ ಬಟ್ಟೆಗಳನ್ನು ಉಚಿತವಾಗಿ ವಿತರಿಸಿದರು.

ಮುನಿರಾಜು ಅವರ ಭಾವಚಿತ್ರವಿರುವ 2018ನೇ ವರ್ಷದ ಕ್ಯಾಲೆಂಡರನ್ನು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಬಿಡುಗಡೆ ಮಾಡಿದರು.

‘ಕ್ಷೇತ್ರದ ಜನರ ಸಮಸ್ಯೆಗಳನ್ನು ಬಗೆಹರಿಸಿ, ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿ. ಬರುವ ಚುನಾವಣೆಯಲ್ಲಿ ನಮ್ಮ ಪಕ್ಷ ಗೆದ್ದು, ಸಚಿವರಾಗುವ ಭಾಗ್ಯ ನಿಮಗೆ ಲಭಿಸಲಿ’ ಎಂದು ಶುಭ ಹಾರೈಸಿದರು.

‘ಹಿರಿಯರು, ಸಂಘ-ಸಂಸ್ಥೆಗಳ ಪ್ರತಿನಿಧಿಗಳು, ಜನಪ್ರತಿನಿಧಿಗಳು, ಪಕ್ಷದ ಕಾರ್ಯಕರ್ತರು ಹಾಗೂ ಕ್ಷೇತ್ರದ ಸಾವಿರಾರು ಜನರು ನನ್ನ ಹುಟ್ಟುಹಬ್ಬಕ್ಕೆ ಹಾರೈಸಿದ್ದಾರೆ. ಇನ್ನೂ ಹೆಚ್ಚಿನ ಅಭಿವೃದ್ಧಿ ಕೆಲಸ ಮಾಡಲು ಶಕ್ತಿ ನೀಡಿದ್ದಾರೆ’ ಎಂದು ಮುನಿರಾಜು ಧನ್ಯವಾದ ಸಲ್ಲಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.