ಎರಡನೇ ಏಕದಿನ ಪಂದ್ಯ: ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ಶ್ರೀಲಂಕಾ; ತಾಳ್ಮೆಯ ಆಟ ಪ್ರದರ್ಶಿಸುತ್ತಿರುವ ಭಾರತೀಯ ಬ್ಯಾಟ್ಸ್‌ಮನ್‌ಗಳು

ಮೊಹಾಲಿ: ಪಂಜಾಬ್ ಕ್ರಿಕೆಟ್ ಸಂಸ್ಥೆಯ ಅಂಗಳದಲ್ಲಿ ಬುಧವಾರ ಆರಂಭಗೊಂಡಿರುವ ಭಾರತ–ಶ್ರೀಕಂಕಾ ಏಕದಿನ ಕ್ರಿಕೆಟ್ ಸರಣಿಯ ಎರಡನೇ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.
ಧರ್ಮಶಾಲಾ ಅಂಗಳದಲ್ಲಿ ಸಿಂಹಳೀಯ ನಾಡಿನ ತಂಡ ಟೀಂ ಇಂಡಿಯಾಗೆ ಸೋಲಿನ ರುಚಿ ತೋರಿಸಿತ್ತು. ಬ್ಯಾಟಿಂಗ್ ವೈಫಲ್ಯ ಅನುಭವಿಸಿದ್ದ ತಂಡ ಇಂದು ತಾಳ್ಮೆಯುತ ಆಟ ಪ್ರದರ್ಶಿಸುತ್ತಿದ್ದು, 11 ಓವರ್‌ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 48 ರನ್ ಗಳಿಸಿದೆ.
ಸರಣಿ ಜಯದ ಕನಸು ಜೀವಂತವಾಗಿಟ್ಟುಕೊಳ್ಳಬೇಕಾದರೆ ಈ ಹೋರಾಟದಲ್ಲಿ ಆತಿಥೇಯರು ಗೆಲ್ಲಲೇಬೇಕು. ಹೀಗಾಗಿ ಇದು ರೋಹಿತ್ ಶರ್ಮಾ ಪಡೆಯ ಪಾಲಿಗೆ ‘ಮಾಡು ಇಲ್ಲವೇ ಮಡಿ’ ಪೈಪೋಟಿಯಾಗಿದೆ.
ಏಕದಿನ ಮಾದರಿಯಲ್ಲಿ ಎರಡು ದ್ವಿಶತಕ ಸಿಡಿಸಿರುವ ಏಕೈಕ ಬ್ಯಾಟ್ಸ್‌ಮನ್ ಎಂಬ ದಾಖಲೆ ಹೊಂದಿರುವ ರೋಹಿತ್, ಧರ್ಮಶಾಲಾದಲ್ಲಿ ಕೇವಲ ಎರಡು ರನ್ ಗಳಿಸಿ ಪೆವಿಲಿಯನ್ ಸೇರಿಕೊಂಡಿದ್ದರು. ಸ್ಫೋಟಕ ಆಟಕ್ಕೆ ಹೆಸರಾಗಿರುವ ಎಡಗೈ ಬ್ಯಾಟ್ಸ್‌ಮನ್ ಶಿಖರ್ ಧವನ್ ಸೊನ್ನೆ ಸುತ್ತಿದ್ದರು. ಇದೇ ಜೋಡಿ ಆರಂಭಿಕರಾಗಿ ಕಣಕ್ಕಿಳಿದಿದ್ದು, ರೋಹಿತ್(19), ಧವನ್(28) ತಾಳ್ಮೆಯ ಆಟ ಪ್ರದರ್ಶಿಸುತ್ತಿದ್ದಾರೆ.
ಪ್ರಸ್ತುತ ಸ್ಕೋರ್:
11 ಓವರ್‌ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 48 ರನ್
ರೋಹಿತ್ ಶರ್ಮಾ –19
ಶಿಖರ್ ಧವನ್– 28
* ವಾಷಿಂಗ್ಟನ್ ಸುಂದರ್‌ಗೆ ಮೊದಲ ಅಂತರರಾಷ್ಟ್ರೀಯ ಏಕದಿನ ಪಂದ್ಯ
We have a new kid on the block. Washington Sundar is all set to make his ODI debut here in Mohali #TeamIndia #INDvSL pic.twitter.com/VxquVkgSIa
— BCCI (@BCCI) December 13, 2017
ತಂಡಗಳು ಇಂತಿವೆ
ಭಾರತ: ರೋಹಿತ್ ಶರ್ಮಾ (ನಾಯಕ), ಶಿಖರ್ ಧವನ್, ಅಜಿಂಕ್ಯ ರಹಾನೆ, ಶ್ರೇಯಸ್ ಅಯ್ಯರ್, ಮನೀಷ್ ಪಾಂಡೆ, ವಾಷಿಂಗ್ಟನ್ ಸುಂದರ್, ದಿನೇಶ್ ಕಾರ್ತಿಕ್, ಮಹೇಂದ್ರ ಸಿಂಗ್ ದೋನಿ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯಜುವೇಂದ್ರ ಚಹಾಲ್, ಜಸ್ಪ್ರೀತ್ ಬೂಮ್ರಾ, ಭುವನೇಶ್ವರ್ ಕುಮಾರ್ ಮತ್ತು ಸಿದ್ದಾರ್ಥ್ ಕೌಲ್.
ಶ್ರೀಲಂಕಾ: ತಿಸಾರ ಪೆರೇರಾ (ನಾಯಕ), ಉಪುಲ್ ತರಂಗ, ಧನುಷ್ಕಾ ಗುಣತಿಲಕ, ಲಾಹಿರು ತಿರಿಮಾನ್ನೆ, ಏಂಜೆಲೊ ಮ್ಯಾಥ್ಯೂಸ್, ಅಸೆಲಾ ಗುಣರತ್ನೆ, ನಿರೋಷನ್ ಡಿಕ್ವೆಲ್ಲಾ, ಚತುರಂಗ ಡಿ ಸಿಲ್ವ, ಅಖಿಲ ಧನಂಜಯ, ಸುರಂಗ ಲಕ್ಮಲ್, ನುವಾನ್ ಪ್ರದೀಪ, ಸದೀರ ಸಮರವಿಕ್ರಮ, ಧನಂಜಯ ಡಿಸಿಲ್ವ, ದುಷಮಂತ ಚಾಮೀರ, ಸಚಿತ್ ಪತಿರಾಣ ಮತ್ತು ಕುಶಾಲ್ ಪೆರೇರಾ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.