ಭಾನುವಾರ, ಮಾರ್ಚ್ 7, 2021
26 °C

ಸರಣಿ ಜಯದ ಭರವಸೆ

ಎಂ. ಮಹೇಶ Updated:

ಅಕ್ಷರ ಗಾತ್ರ : | |

ಸರಣಿ ಜಯದ ಭರವಸೆ

ಬೆಳಗಾವಿ: ಮೊದಲ ಪಂದ್ಯದಲ್ಲಿ ಸುಲಭವಾಗಿ ಗೆಲುವು ಸಾಧಿಸಿರುವ ಭಾರತ ಮಹಿಳಾ ‘ಎ’ ತಂಡದವರು ಮತ್ತೊಂದು ಜಯದ ಭರವಸೆಯಲ್ಲಿದ್ದಾರೆ. ಬಾಂಗ್ಲಾದೇಶ ಮಹಿಳಾ ‘ಎ’ ತಂಡದ ವಿರುದ್ಧ ಗುರುವಾರ ನಡೆಯಲಿರುವ ಟ್ವೆಂಟಿ–20 ಕ್ರಿಕೆಟ್‌ ಪಂದ್ಯದಲ್ಲಿ ಗೆದ್ದು ಸರಣಿಯನ್ನು ತಮ್ಮದಾಗಿಸಿಕೊಳ್ಳುವ ವಿಶ್ವಾಸ ತಂಡದ್ದು.

ಇಲ್ಲಿನ ಕೆ.ಎಸ್‌.ಸಿ.ಎ. ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದ್ದು ಎರಡೂ ತಂಡಗಳ ಅಟಗಾರ್ತಿಯರು ಬುಧವಾರ ನೆಟ್ಸ್‌ನಲ್ಲಿ ಕಠಿಣ ಅಭ್ಯಾಸ ನಡೆಸಿದರು.

ಮೂರು ಪಂದ್ಯಗಳ ಟ್ವೆಂಟಿ–20 ಸರಣಿಯ ಮೊದಲ ಪಂದ್ಯ ಎರಡು ದಿನಗಳ ಹಿಂದೆ ನಡೆದಿತ್ತು. ಆ ಪಂದ್ಯವನ್ನು ಭಾರತ ಎಂಟು ವಿಕೆಟ್‌ಗಳಿಂದ ಗೆದ್ದಿತ್ತು. ಮೊದಲ ಪಂದ್ಯದಲ್ಲಿ ಉತ್ತಮ ಸಾಮರ್ಥ್ಯ ತೋರಿದ ಎಸ್‌. ಮೇಘನಾ ಹಾಗೂ ಕರ್ನಾಟಕದ ವಿ.ಆರ್‌. ವನಿತಾ ಅವರು ತಂಡದ ಬ್ಯಾಟಿಂಗ್‌ ವಿಭಾಗದ ಭರವಸೆ ಎನಿಸಿದ್ದಾರೆ.

ಇನ್ನೊಂದೆಡೆ, ಸರಣಿ ಜಯದ ಆಸೆ ಜೀವಂತವಾಗಿ ಉಳಿಸಿಕೊಳ್ಳಲು ಗುರುವಾರದ ಪಂದ್ಯವನ್ನು ಗೆಲ್ಲಲೇಬೇಕಾದ ಅನಿವಾರ್ಯತೆ ಸ್ಥಿತಿಯಲ್ಲಿ ಪ್ರವಾಸಿ ತಂಡದವರಿದ್ದಾರೆ. ಇದಕ್ಕಾಗಿ ಅವರು ಎರಡೂ ದಿನ ನೆಟ್ಸ್‌ನಲ್ಲಿ ಬ್ಯಾಟಿಂಗ್‌, ಬೌಲಿಂಗ್‌ ಅಭ್ಯಾಸ ನಡೆಸಿದರು.

ಪಂದ್ಯ ಆರಂಭ: ಬೆಳಿಗ್ಗೆ 9.30ಕ್ಕೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.