ಶನಿವಾರ, ಫೆಬ್ರವರಿ 27, 2021
28 °C

ರಾಜ್ಯ ಸರ್ಕಾರ ಕೃಪಾಪೋಷಿತ ಭಯೋತ್ಪಾದನೆ ವಿರೋಧಿಸಿ 'ಜೈಲ್‌ ಭರೋ': ಸಚಿವ ಅನಂತಕುಮಾರ ಹೆಗಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಜ್ಯ ಸರ್ಕಾರ ಕೃಪಾಪೋಷಿತ ಭಯೋತ್ಪಾದನೆ ವಿರೋಧಿಸಿ 'ಜೈಲ್‌ ಭರೋ': ಸಚಿವ ಅನಂತಕುಮಾರ ಹೆಗಡೆ

ಶಿರಸಿ: ಹೊನ್ನಾವರದಲ್ಲಿ ಕಾವ್ಯಾ ನಾಯ್ಕ ಮೇಲೆ ಚಾಕು ಇರಿತ ನಡೆದಿರುವುದನ್ನು ಎಲ್ಲರೂ ಗಂಭೀರ ಪರಿಗಣಿಸಿದ್ದಾರೆ ಎಂದು ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಪ್ರತಿಕ್ರಿಯಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಕೃಪಾಪೋಷಿತ ಭಯೋತ್ಪಾದನೆಯ ವಿರುದ್ಧ ಇಡೀ ರಾಜ್ಯದಾದ್ಯಂತ ಜೈಲ್ ಭರೋ ಕಾರ್ಯಕ್ರಮ‌ ಹಮ್ಮಿಕೊಳ್ಳಲಾಗುವುದು. ಡಿ.19 ರಿಂದ ಉತ್ತರ ಕನ್ನಡದಿಂದ ಈ ಕಾರ್ಯಕ್ರಮ ಪ್ರಾರಂಭಿಸಲಾಗುವುದು ಎಂದರು.

ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ ಪ್ರತಿನಿತ್ಯ ಒಂದಲ್ಲ ಒಂದು ಕಡೆ ಈ ಕಾರ್ಯಕ್ರಮ ನಡೆಸಲಾಗುತ್ತದೆ ಎಂದು ಹೇಳಿದರು.

ಸ್ವಜನ ಪಕ್ಷಪಾತದ ಕಾಂಗ್ರೆಸ್ ಸರ್ಕಾರದಲ್ಲಿ ಅಧಿಕಾರಿಗಳು ನೈತಿಕತೆ ಕಳೆದುಕೊಂಡಿದ್ದಾರೆ. ಸರ್ಕಾರ ಹೇಳಿದಂತೆ ಅಧಿಕಾರಿಗಳು ಕೇಳುತ್ತಾರೆ. ಶಿರಸಿಯಲ್ಲಿ ನಡೆದ ಗಲಭೆಯಲ್ಲಿ ಪೊಲೀಸರೇ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಆರೋಪಿಸಿದರು.

ಕೇಂದ್ರ ಸಚಿವರಾಗಲು ಅನಂತಕುಮಾರ ಹೆಗಡೆಗೆ ಅರ್ಹತೆ ಇಲ್ಲ ಎನ್ನುವ ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಸ್ಥಾನದಲ್ಲಿ ಕುಳಿತುಕೊಳ್ಳುವ ಅರ್ಹತೆ ಇದೆಯೇ ಎಂದು‌ ಪ್ರಶ್ನಿಸಿದರು.

ಸಿದ್ದರಾಮಯ್ಯ ಅವರ ಬಗ್ಗೆ ಪಕ್ಷದಲ್ಲಿ ಅಸಮಾಧಾನ ಇದೆ. ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಿಗೆ ಅವರ ಬಗ್ಗೆ ಒಲವಿಲ್ಲ ಎಂದರು.

ಖಾಸಗಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ: ಪರೇಶ ಮೇಸ್ತ ಸಾವಿನ ಪ್ರಕರಣವನ್ನು ಸರ್ಕಾರ ಸಿಬಿಐಗೆ ಹಸ್ತಾಂತರಿಸಿದೆ. ಮೇಲ್ನೋಟಕ್ಕೆ ಇದು ಸತ್ಯವಾದರೂ ದಾಖಲೆಗಳ ನಾಶ ಮಾಡಲಾಗಿದೆ. ಮರಣೋತ್ತರ ಪರೀಕ್ಷೆಯನ್ನು ಸರ್ಕಾರಿ ಆಸ್ಪತ್ರೆಯಲ್ಲಿ ನಡೆಸದೇ ಖಾಸಗಿ ಆಸ್ಪತ್ರೆಯಲ್ಲಿ ಮಾಡಿರುವುದು ಅನುಮಾನ ಮೂಡಿಸಿದೆ ಎಂದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.