ಭಾನುವಾರ, ಮಾರ್ಚ್ 7, 2021
18 °C

ಅಂಕೋಲಾ: ಪೊಲೀಸ್ ಪಥ ಸಂಚಲನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಅಂಕೋಲಾ: ಪೊಲೀಸ್ ಪಥ ಸಂಚಲನ

ಅಂಕೋಲಾ: ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಇತ್ತೀಚಿಗೆ ನಡೆದ ಗಲಭೆ ಹಿನ್ನೆಲೆಯಲ್ಲಿ ಶಾಂತಿ ಪಾಲನೆ ಮತ್ತು ಕಾನೂನು ಸುವ್ಯವಸ್ಥೆ ಕುರಿತು ನಾಗರಿಕರಲ್ಲಿ ಭರವಸೆ ಮೂಡಿಸುವ ಉಪಕ್ರಮವಾಗಿ ಬುಧವಾರ ಸಂಜೆ ಪಟ್ಟಣದಲ್ಲಿ ಪೊಲೀಸ್ ಸಿಬ್ಬಂದಿ ಪಥ ಸಂಚಲನ ನಡೆಸಿದರು.

ಸಿ.ಪಿ.ಐ. ಬಸಪ್ಪ ಬುರ್ಲಿ ಮಾರ್ಗದರ್ಶನದಲ್ಲಿ ಪಿ.ಎಸ್.ಐ. ವೀಣಾ ಹೊನ್ನಿ ಪಥಸಂಚಲನದ ನೇತೃತ್ವ ವಹಿಸಿದ್ದರು. ಪೊಲೀಸ್ ಠಾಣೆ ಎದುರಿನ ವೃತ್ತದಿಂದ ಹೊರಟ ಪಥಸಂಚಲನವು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಬಂಡಿಬಝಾರ, ಕಿತ್ತೂರು ಚನ್ನಮ್ಮ ರಸ್ತೆ ಮುಂತಾದ ಕಡೆಗೆ ಹಾಯ್ದು ಸಂಪನ್ನಗೊಂಡಿತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.