ಬುಧವಾರ, ಫೆಬ್ರವರಿ 24, 2021
23 °C

ಮಹಿಳಾ ಕ್ರಿಕೆಟ್‌: ಬಾಂಗ್ಲಾ ವಿರುದ್ಧ ಭಾರತಕ್ಕೆ 40ರನ್‌ ಜಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಹಿಳಾ ಕ್ರಿಕೆಟ್‌: ಬಾಂಗ್ಲಾ ವಿರುದ್ಧ ಭಾರತಕ್ಕೆ 40ರನ್‌ ಜಯ

ಬೆಳಗಾವಿ: ಬಾಂಗ್ಲಾದೇಶ ಮಹಿಳಾ 'ಎ' ತಂಡದ ವಿರುದ್ಧದ ಟ್ವೆಂಟಿ- 20 ಕ್ರಿಕೆಟ್ ಸರಣಿಯ ಎರಡನೇ ಪಂದ್ಯದಲ್ಲಿ ಭಾರತ ವನಿತೆಯರ ‘ಎ’ ತಂಡ 40ರನ್‌ಗಳ ಸುಲಭ ಜಯ ಸಾಧಿಸಿದೆ. ಈ ಮೂಲಕ ಮೂರು ಪಂದ್ಯಗಳ ಸರಣಿಯನ್ನು 2–0 ಅಂತರದಿಂದ ಗೆದ್ದುಕೊಂಡಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಭಾರತ ತಂಡ ನಿಗದಿತ 20 ಓವರ್‌ಗಳಲ್ಲಿ ನಾಲ್ಕು ವಿಕೆಟ್‌ ನಷ್ಟಕ್ಕೆ 152ರನ್‌ ಕಲೆ ಹಾಕಿತು. ಕೇವಲ 33 ಎಸೆತಗಳಲ್ಲಿ 7 ಬೌಂಡರಿ ಸಹಿತ 63ರನ್‌ ಕಲೆಹಾಕಿದ ಜೆ‌.ರೋಡ್ರಿಗಸ್ ಬಾಂಗ್ಲಾ ಬೌಲರ್‌ಗಳ ಬೆವರಿಳಿಸಿದರು.

ಇದಕ್ಕುತ್ತರವಾಗಿ ಬ್ಯಾಟಿಂಗ್‌ ಆರಂಭಿಸಿದ ಬಾಂಗ್ಲಾ ತಂಡ ನಿಗದಿತ ಓವರ್‌ಗಳಲ್ಲಿ 8 ವಿಕೆಟ್‌ ಕಳೆದುಕೊಂಡು 112ರನ್‌ಗಳಿಸಿ ಸೋಲು ಅನುಭವಿಸಿತು.

ಈಗಾಗಲೇ ಏಕದಿನ ಸರಣಿಯಲ್ಲಿ ಕ್ಲೀನ್‌ ಸ್ವೀಪ್‌ ಸಾಧನೆ ಮಾಡಿರುವ ಭಾರತ ತಂಡ ಟಿ20 ಸರಣಿಯಲ್ಲೂ ಪಾರಮ್ಯ ಮೆರೆಯಿತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.