ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫೆಬ್ರುವರಿಯಲ್ಲಿ 4ನೇ ಜಿಲ್ಲಾ ಸಮ್ಮೇಳನ

ಕನ್ನಡ ಸಾಹಿತ್ಯ ಪರಿಷತ್‌ ಜಿಲ್ಲಾ ಕಾರ್ಯಕಾರಣಿ ಸಮಿತಿ ಸಭೆಯಲ್ಲಿ ನಿರ್ಣಯ
Last Updated 14 ಡಿಸೆಂಬರ್ 2017, 9:29 IST
ಅಕ್ಷರ ಗಾತ್ರ

ಯಾದಗಿರಿ: ಮುಂಬರುವ ಫೆಬ್ರುವರಿ ತಿಂಗಳಲ್ಲಿ 4ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಅದ್ಧೂರಿಯಾಗಿ ಹಮ್ಮಿಕೊಳ್ಳುವ ಕುರಿತು ಜಿಲ್ಲಾ ಕನ್ನಡ ಸಾಹಿತ್ಯ ಕಚೇರಿಯಲ್ಲಿ ನಡೆದ ಜಿಲ್ಲಾ ಕಾರ್ಯಕಾರಣಿ ಸಮಿತಿ ಸಭೆಯಲ್ಲಿ ನಿರ್ಣಯಿಸಲಾಯಿತು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಸಿದ್ದಪ್ಪ ಹೊಟ್ಟಿ ಮಾತನಾಡಿ,‘3ನೇ ಕನ್ನಡ ಸಾಹಿತ್ಯ ಸಮ್ಮೇಳನ ಸುರಪುರದಲ್ಲಿ ಅದ್ಧೂರಿಯಾಗಿ ಈಚೆಗೆ ನಡೆಯಿತು. ಈಗ 4ನೇ ಸಾಹಿತ್ಯ ಸಮ್ಮೇಳನ ನಡೆಸಲು ಸಿದ್ಧತೆ ನಡೆಸಲು ಉದ್ದೇಶಿಸಲಾಗಿದೆ. ಈ ಕುರಿತು ಸಾಹಿತ್ಯಾಸಕ್ತರು, ಸಾಹಿತಿಗಳು ಸಮ್ಮೇಳನ ನಡೆಸುವಂತೆ ಪರಿಷತ್‌ಗೆ ಮನವಿ ಕೂಡ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ 4ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಉದ್ದೇಶಿಸಲಾಗಿದೆ’ ಎಂದು ವಿವರಿಸಿದರು.

ಯಾದಗಿರಿ, ಸುರಪುರ, ಶಹಾಪುರದಲ್ಲಿ ತಾಲ್ಲೂಕು ಸಮ್ಮೇಳನಗಳು ಬರುವ ಮಾರ್ಚ್ ತಿಂಗಳಿಗಳೊಳಗಾಗಿ ಆಯೋಜಿಸಬೇಕು ಎಂದು ತಾಲ್ಲೂಕು ಕಸಾಪ ಅಧ್ಯಕ್ಷರಿಗೆ ಅವರು ಸೂಚಿಸಿದರು.

ಸುರಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಶ್ರೀನಿವಾಸ ಜಾಲವಾದಿ ಮಾತನಾಡಿ, ‘ಕಳೆದ ವರ್ಷ 3ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ ಅದ್ಧೂರಿಯಾಗಿ ಮಾಡಲು ಜಿಲ್ಲಾ ಪದಾಧಿಕಾರಿಗಳು ಸಹಕರಿಸಿದ್ದಾರೆ. ಅದೇ ರೀತಿ ತಾಲ್ಲೂಕು ಸಮ್ಮೇಳನ ಆಯೋಜಿಸಲು ತಾಲ್ಲೂಕು ಕಾರ್ಯಕಾರಣಿ ಸಭೆ ಕರೆದು ತೀರ್ಮಾನಿಸಲಾಗುವುದು’ ಎಂದು ಹೇಳಿದರು.

ಯಾದಗಿರಿ ತಾಲ್ಲೂಕು ಪರಿಷತ್ತು ಅಧ್ಯಕ್ಷ ಡಾ.ಭೀಮರಾಯ ಲಿಂಗೇರಿ ಮಾತನಾಡಿ,‘ಕಳೆದ ವರ್ಷ ಗುರುಮಠಕಲ್‌ನಲ್ಲಿ ಮೂರನೇ ತಾಲ್ಲೂಕು ಸಮ್ಮೇಳನ ಯಶಸ್ವಿಯಾಗಿ ನಡೆಸಿದ್ದೇವೆ. ಈಗ ನಾಲ್ಕನೇ ಬಾರಿ ತಾಲ್ಲೂಕು ಸಾಹಿತ್ಯ ಸಮ್ಮೇಳನವನ್ನು ತಾಲ್ಲೂಕಿನ ಪದಾಧಿಕಾರಿಗಳ ಸಭೆ ಕರೆದು ಯಾದಗಿರಿ ಕೇಂದ್ರ ಸ್ಥಾನದಲ್ಲಿ ನಡೆಸಲು ನಿರ್ಧರಿಸಲಾಗಿದೆ’ ಎಂದರು.

ಜಿಲ್ಲಾ ಕಸಾಪ ಕಾರ್ಯದರ್ಶಿ ಡಾ.ಸುಭಾಷಚಂದ್ರ ಕೌಲಗಿ. ಪ್ರಕಾಶ ಅಂಗಡಿ ಕನ್ನಳ್ಳಿ ಸಮಿತಿ ಸದಸ್ಯರಾದ ಅಯ್ಯಣ್ಣ ಹುಂಡೇಕಾರ. ಸಿದ್ಧಲಿಂಗಪ್ಪ ಆನೆಗುಂದಿ. ಆರ್.ಮಹಾದೇವಪ್ಪ ಅಬ್ಬೆತುಮಕೂರ, ಬಸವಂತ್ರಾಯ ಮಾಲಿಪಾಟೀಲ ಮುಂತಾದವರು ಇದ್ದರು.

**

ಸಮ್ಮೇಳನವನ್ನು ಅದ್ಧೂರಿಯಾಗಿ ನಡೆಸಲು ಸಕಲ ಸಿದ್ಧತೆ ಕೈಗೊಳ್ಳುತ್ತೇವೆ. ಎಲ್ಲರ ಜೊತೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ.

–ಸಿದ್ದಪ್ಪ ಹೊಟ್ಟಿ, ಅಧ್ಯಕ್ಷ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT