ಶನಿವಾರ, ಫೆಬ್ರವರಿ 27, 2021
28 °C

ಗುಂಡು ಹಾರಿಸಿಕೊಂಡು ಸಂಸದ ಆತ್ಮಹತ್ಯೆ

ಎಪಿ Updated:

ಅಕ್ಷರ ಗಾತ್ರ : | |

ಗುಂಡು ಹಾರಿಸಿಕೊಂಡು ಸಂಸದ ಆತ್ಮಹತ್ಯೆ

ಫ್ರಾಂಕ್‌ಫರ್ಟ್‌, ಅಮೆರಿಕ: ಯುವತಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿದ್ದ ರಿಪಬ್ಲಿಕನ್‌ ಪಕ್ಷದ ಕೆಂಟುಕಿ ಸಂಸದ ಡಾನ್‌ ಜಾನ್ಸನ್‌ (57) ಅವರು ಗುರುವಾರ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

2016 ರಲ್ಲಿ ಸಂಸದರಾಗಿ ಆಯ್ಕೆಯಾಗಿದ್ದ ಅವರು ಚುನಾವಣೆ ಪ್ರಚಾರದ ವೇಳೆ, ಮಾಜಿ ಅಧ್ಯಕ್ಷ ಬರಾಕ್‌ ಒಬಾಮ ಮತ್ತು ಅವರ ಹೆಂಡತಿ ಮಿಷೆಲ್‌ ಅವರನ್ನು ಕೋತಿಗಳಿಗೆ ಹೋಲಿಸಿ ಫೇಸ್‌ಬುಕ್‌ ಪೋಸ್ಟ್‌ ಮಾಡುವ ಮೂಲಕ ಟೀಕೆಗೆ ಗುರಿಯಾಗಿದ್ದರು.

ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿದ್ದ ಜಾನ್ಸನ್‌, ತಮ್ಮ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಸುಳ್ಳು ಎಂದು ಹೇಳಿದ್ದರು. ಇದರ ಬೆನ್ನಲ್ಲೇ ಈಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.