ಶನಿವಾರ, ಫೆಬ್ರವರಿ 27, 2021
27 °C

‘ವರ್ಗಾವಣೆ ಪತ್ರಕ್ಕೆ ಸಹಿ ಹಾಕಲು ಸಿದ್ದರಾಮಯ್ಯಗೆ ಪುರುಸೊತ್ತಿದೆ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

‘ವರ್ಗಾವಣೆ ಪತ್ರಕ್ಕೆ ಸಹಿ ಹಾಕಲು ಸಿದ್ದರಾಮಯ್ಯಗೆ ಪುರುಸೊತ್ತಿದೆ’

ಬೆಂಗಳೂರು: ‘ರಾಜ್ಯ ಎಷ್ಟೊಂದು ಸಮಸ್ಯೆಗಳನ್ನು ಎದುರಿಸುತ್ತಿದೆ. ಆದರೂ ಮುಖ್ಯಮಂತ್ರಿಗಳಿಗೆ ಮಾತ್ರ ವರ್ಗಾವಣೆಯ ಶಿಫಾರಸು ಪತ್ರಗಳಿಗೆ ಸಹಿ ಹಾಕಲು ಪುರುಸೊತ್ತಿದೆ’ ಎಂದು ಹೈಕೋರ್ಟ್‌ ಕಟಕಿಯಾಡಿದೆ.

ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಚ್‌.ಜಿ.ರಮೇಶ್ ಹಾಗೂ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಗುರುವಾರ ವರ್ಗಾವಣೆಗೆ ಸಂಬಂಧಿಸಿದ ಪ್ರಕರಣವೊಂದರ ವಿಚಾರಣೆ ನಡೆಸಿತು.

ಈ ವೇಳೆ ಎಚ್‌.ಜಿ.ರಮೇಶ್ ಅವರ ಪ್ರಶ್ನೆಗೆ ಸರ್ಕಾರಿ ವಕೀಲರು, ‘ಸ್ವಾಮಿ ಈ ಪ್ರಕರಣದಲ್ಲಿ ಮುಖ್ಯಮಂತ್ರಿಗಳ ಶಿಫಾರಸಿನ ಮೇರೆಗೆ ವರ್ಗಾವಣೆ ಮಾಡಲಾಗಿದೆ’ ಎಂದರು.

ಇದಕ್ಕೆ ಅಸಮಾಧಾನ ಹೊರಹಾಕಿದ ರಮೇಶ್, ‘ಏನ್ರೀ, ಆಡಳಿತಾತ್ಮಕ ಪ್ರಕ್ರಿಯೆಗೆ ಅನುಕೂಲವಾಗುವಂತೆ ವರ್ಗಾವಣೆಗೆ ಶಿಫಾರಸು ಮಾಡಿದರೆ ಸರಿ. ಆದರೆ, ಪ್ರತಿನಿತ್ಯ ಸಾಕಷ್ಟು ವರ್ಗಾವಣೆ ಪತ್ರಗಳಿಗೆ ಆದೇಶಿಸುತ್ತಾ ರಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.