ಬೆಂಗಳೂರು: ರಾಜಾಜಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಾರ್ಡ್‌ಗಳ ಕುಂದು ಕೊರತೆಗಳಿಗೆ ಪರಿಹಾರ ಕಂಡುಕೊಳ್ಳಲು ‘ಪ್ರಜಾವಾಣಿ’ ಮತ್ತು ‘ಡೆಕ್ಕನ್ ಹೆರಾಲ್ಡ್’ ಪತ್ರಿಕೆಗಳ ಆಶ್ರಯದಲ್ಲಿ ‘ಜನಸ್ಪಂದನ–ಸಿಟಿಜನ್ಸ್ ಫಾರ್ ಚೇಂಜ್’ ಕಾರ್ಯಕ್ರಮ ಇದೇ 16ರಂದು ಬೆಳಿಗ್ಗೆ 10ಕ್ಕೆ ರಾಜಾಜಿನಗರ ಎರಡನೇ ಬ್ಲಾಕ್‌ನ ರಾಜರಾಜೇಶ್ವರಿ ಕಲ್ಯಾಣ ಮಂಟಪದಲ್ಲಿ (ರಾಜಾಜಿನಗರ ಆರ್‌ಟಿಒ ಕಚೇರಿ ಹತ್ತಿರ) ನಡೆಯಲಿದೆ.

ರಾಜಾಜಿನಗರ ಕ್ಷೇತ್ರದ ಶಾಸಕ ಎಸ್. ಸುರೇಶ್ ಕುಮಾರ್, ಕ್ಷೇತ್ರದ ವಿವಿಧ ವಾರ್ಡ್‌ಗಳ ಪಾಲಿಕೆ ಸದಸ್ಯರು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಬೆಸ್ಕಾಂ, ಜಲಮಂಡಳಿ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಸಾರ್ವಜನಿಕರು ತಮ್ಮ ವಾರ್ಡ್‌ಗಳ ಕುಡಿಯುವ ನೀರು ಪೂರೈಕೆ ವ್ಯತ್ಯಯ, ಕಸ ವಿಲೇವಾರಿ ಸಮಸ್ಯೆ, ರಸ್ತೆ ಸುರಕ್ಷತೆ, ಉದ್ಯಾನಗಳಿಗೆ ಸಂಬಂಧಿಸಿದ ಕುಂದು ಕೊರತೆಗಳ ಬಗ್ಗೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಜೊತೆ ಚರ್ಚಿಸಿ ಪರಿಹಾರ ಕಂಡುಕೊಳ್ಳಬಹುದು. ತನ್ಮೂಲಕ ವಾರ್ಡ್‌ನ ಅಭಿವೃದ್ಧಿಲ್ಲಿ ಕೈಜೋಡಿಸಬಹುದು. ಕ್ಷೇತ್ರದ ಕುಂದುಕೊರತೆಗಳ ಬಗ್ಗೆ ಗಮನ ಸೆಳೆಯಲು ಇಚ್ಛಿಸುವವರು 16ರಂದು ಬೆಳಿಗ್ಗೆ 9ರಿಂದ ಸ್ಥಳದಲ್ಲೇ ಹೆಸರು ನೋಂದಾಯಿಸಬಹುದು. ಬೆಳಿಗ್ಗೆ 10ರಿಂದ ಪ್ರಶ್ನೆ ಕೇಳಲು ಅವಕಾಶ ಕಲ್ಪಿಸಲಾಗುತ್ತದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.