ಇಂದಿರಾ ಕ್ಯಾಂಟೀನ್‌ಗೆ ಕೇಂದ್ರದ ಅಧಿಕಾರಿ ಮೆಚ್ಚುಗೆ

ಬೆಂಗಳೂರು: ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ ದುರ್ಗಾ ಶಂಕರ್ ಮಿಶ್ರಾ ಅವರು ಕೆ.ಆರ್.ಮಾರುಕಟ್ಟೆಯಲ್ಲಿರುವ ಇಂದಿರಾ ಕ್ಯಾಂಟೀನ್ ಹಾಗೂ ಎಸ್.ಪಿ.ರಸ್ತೆಯಲ್ಲಿರುವ ಕೇಂದ್ರೀಕೃತ ಅಡುಗೆ ಮನೆಗೆ ಗುರುವಾರ ಭೇಟಿ ನೀಡಿ ಯೋಜನೆಯ ಬಗ್ಗೆ ಮಾಹಿತಿ ಪಡೆದರು.
ಇಂದಿರಾ ಕ್ಯಾಂಟೀನ್‌ನ ಕಾರ್ಯನಿರ್ವಹಣೆ ಮತ್ತು ಯೋಜನೆಯ ಬಗ್ಗೆ ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮಹೇಂದ್ರ ಜೈನ್ ಹಾಗೂ ಪಾಲಿಕೆ ಆಯುಕ್ತ ಎನ್.ಮಂಜುನಾಥ ಪ್ರಸಾದ್ ಮಾಹಿತಿ ನೀಡಿದರು.
ಕೇಂದ್ರೀಕೃತ ಅಡುಗೆ ಮನೆಯಲ್ಲಿ ಆಹಾರ ತಯಾರಿಕೆ, ಶುಚಿತ್ವಕ್ಕೆ ಕೈಗೊಂಡಿರುವ ಕ್ರಮಗಳು, ಕ್ಯಾಂಟೀನ್‌ಗಳಿಗೆ ಆಹಾರ ಸರಬರಾಜು, ತಿಂಡಿ– ಊಟದ ಮೆನು ಬಗ್ಗೆ ವಿವರಿಸಿದರು. ಅಲ್ಲಿ ಉಪಾಹಾರವನ್ನು ಸೇವಿಸಿದ ಮಿಶ್ರಾ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.