6
X

'ಪ್ರಜಾವಾಣಿ'ಯ ಜಾಲತಾಣವನ್ನು ಹೆಚ್ಚು ಓದುಗ ಸ್ನೇಹಿಯಾಗಿಸುವ ಉದ್ದೇಶದಿಂದ ಹೊಸ ವಿನ್ಯಾಸವನ್ನು ರೂಪಿಸಲಾಗಿದೆ.
ಈ ವಿನ್ಯಾಸದ ಕುರಿತ ನಿಮ್ಮ ಅಭಿಪ್ರಾಯಗಳನ್ನು ಇಲ್ಲಿರುವ ಲಿಂಕ್ ಕ್ಲಿಕ್ಕಿಸುವ ಮೂಲಕ ನಮಗೆ ತಿಳಿಸಬಹುದು

webfeedback@prajavani.co.in

ಜ.13ರಂದು ಸುಳ್ಯ ತಾಲ್ಲೂಕು ಸಾಹಿತ್ಯ ಸಮ್ಮೇಳನ

Published:
Updated:

ಸುಳ್ಯ: ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಜನವರಿ 13ರಂದು ದುಗ್ಗಲಡ್ಕದಲ್ಲಿ ನಡೆಯಲಿದ್ದು, ಆಮಂತ್ರಣ ಪತ್ರಿಕೆ ಬಿಡುಗಡೆ ಸುಳ್ಯದ ಚೆನ್ನಕೇಶವ ದೇವಸ್ಥಾನದ ಸಭಾಂಗಣದಲ್ಲಿ ಗುರುವಾರ ನಡೆಯಿತು.

ಚೆನ್ನಕೇಶವ ದೇವಾಲಯದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾ.ಕೆ.ವಿ ಚಿದಾನಂದ ಬಿಡುಗಡೆಗೊಳಿಸಿದರು. ಕ.ಸಾ.ಪ ಅಧ್ಯಕ್ಷ ಡಾ. ಹರಪ್ರಸಾದ್ ತುದಿಯಡ್ಕ ಅಧ್ಯಕ್ಷತೆ ವಹಿಸಿದ್ದರು. ಜೀರ್ಣೋದ್ಧಾರ ಸಮಿತಿ ಸದಸ್ಯ ಪಡಂಬೈಲ್ ವೆಂಕಟ್ರಮಣ ಗೌಡ, ನಿಕಟಪೂರ್ವ ಅಧ್ಯಕ್ಷೆ ಮೀನಾಕ್ಷಿ ಗೌಡ, ವರ್ತಕರ ಸಂಘದ ಅಧ್ಯಕ್ಷ ಸುಧಾಕರ್ ರೈ, ಪಟ್ಟಣ ಪಂಚಾಯತಿ ಅಧ್ಯಕ್ಷೆ ಶೀಲಾವತಿ ಮಾಧವ, ಸದಸ್ಯ ಎನ್.ಎ ರಾಮಚಂದ್ರ, ಕಾರ್ಯದರ್ಶಿ ಚಂದ್ರಶೇಖರ ಪೇರಾಲು, ಸ್ವಾಗತ ಸಮಿತಿ ಅಧ್ಯಕ್ಷ ಕೆ.ಟಿ ವಿಶ್ವನಾಥ್, ಪ್ರಧಾನ ಕಾರ್ಯದರ್ಶಿ ಭವಾನಿಶಂಕರ್ ಕಲ್ಮಡ್ಕ, ತುಳುಕೂಟದ ಅಧ್ಯಕ್ಷ ಸಿರಿಲ್ ಡಿಸೋಜ, ಕೋಶಾಧಿಕಾರಿ ದಯಾನಂದ ಆಳ್ವ ಇದ್ದರು.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry