ಗುರುವಾರ , ಮಾರ್ಚ್ 4, 2021
29 °C

ಸಕ್ರಿಯ ರಾಜಕೀಯದಿಂದ ದೂರಾಗುವ ಸುಳಿವು ನೀಡಿದ ಸೋನಿಯಾ ಗಾಂಧಿ

ಏಜೆನ್ಸಿಸ್‌ Updated:

ಅಕ್ಷರ ಗಾತ್ರ : | |

ಸಕ್ರಿಯ ರಾಜಕೀಯದಿಂದ ದೂರಾಗುವ ಸುಳಿವು ನೀಡಿದ ಸೋನಿಯಾ ಗಾಂಧಿ

ನವದೆಹಲಿ: ಕಾಂಗ್ರೆಸ್‌ ಪಕ್ಷದ ರಾಷ್ಟ್ರೀಯ ಘಟಕದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪಕ್ಷದ ಸಂಪೂರ್ಣ ಅಧಿಕಾರವನ್ನು ಉಪಾಧ್ಯಕ್ಷ ರಾಹುಲ್‌ ಗಾಂಧಿಗೆ ವಹಿಸಿಕೊಟ್ಟ ನಂತರ ತಾವು ಸಕ್ರಿಯ ರಾಜಯಕೀಯದಿಂದ ದೂರ ಉಳಿಯುವ ಸೂಚನೆ ನೀಡಿದ್ದಾರೆ.

ರಾಹುಲ್‌ ಗಾಂಧಿ ಅವರಿಗೆ ಪಕ್ಷದ ಜವಾಬ್ದಾರಿ ವಹಿಸಿಕೊಟ್ಟ ಬಳಿಕ ಪಕ್ಷದಲ್ಲಿ ತಮ್ಮ ಪಾತ್ರವೇನಾಗಿರಲಿದೆ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಅವರು ‘ನಿವೃತ್ತಿಯಾಗುವ ಕಾಲ ಬಂದಿದೆ’ ಎಂದು ಪ್ರತಿಕ್ರಿಯಿಸಿದ್ದಾರೆ.

ಸದ್ಯ ಕಾಂಗ್ರೆಸ್‌ ಅಧ್ಯಕ್ಷ ಹುದ್ದೆಯಲ್ಲಿರುವವರೇ ಉಭಯ ಸದನಗಳನ್ನೊಳಗೊಂಡ ಸಂಸತ್ತಿನ ಕಾಂಗ್ರೆಸ್‌ ಸಂಸದೀಯ ಪಕ್ಷದ(ಸಿಪಿಪಿ) ನಾಯಕರೂ ಆಗಿರುತ್ತಾರೆ. ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಸೋನಿಯಾ ನೀಡಿರುವ ಹೇಳಿಕೆ ಸಂಸದೀಯ ನಾಯಕತ್ವವನ್ನೂ ಬಿಟ್ಟುಕೊಡಲಿದ್ದಾರೆಯೇ ಎಂಬ ಪ್ರಶ್ನೆಯನ್ನು ಹುಟ್ಟುಹಾಕಿದೆ.

1998ರಿಂದ ಇಲ್ಲಿಯವರೆಗೆ ನಿರಂತರ 19ವರ್ಷಗಳ ಕಾಲ ಪಕ್ಷವನ್ನು ಮುನ್ನಡೆಸಿದ್ದ ಸೋನಿಯಾ ಅವರು, ಡಿಸೆಂಬರ್‌ 16ರಂದು ರಾಹುಲ್‌ ಗಾಂಧಿಗೆ ಅಧಿಕಾರ ಹಸ್ತಾಂತರಿಸಲಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.