ಬುಧವಾರ, ಮಾರ್ಚ್ 3, 2021
19 °C

ವರ್ಷದೊಳಗೆ ಮಹಾರಾಷ್ಟ್ರ ಬಿಜೆಪಿ ಸರ್ಕಾರದಿಂದ ಹೊರನಡೆಯುತ್ತೇವೆ: ಶಿವಸೇನೆ

ಏಜೆನ್ಸಿಸ್‌ Updated:

ಅಕ್ಷರ ಗಾತ್ರ : | |

ವರ್ಷದೊಳಗೆ ಮಹಾರಾಷ್ಟ್ರ ಬಿಜೆಪಿ ಸರ್ಕಾರದಿಂದ ಹೊರನಡೆಯುತ್ತೇವೆ: ಶಿವಸೇನೆ

ಅಹ್ಮದ್‌ನಗರ: ಇನ್ನು ಒಂದು ವರ್ಷದ ಒಳಗೆ ಬಿಜೆಪಿ ನೇತೃತ್ವದ ಮಹಾರಾಷ್ಟ್ರ ಸರ್ಕಾರದಿಂದ ಹೊರನಡೆಯುವುದಾಗಿ ಶಿವಸೇನೆಯ ಯುವ ನಾಯಕ ಆದಿತ್ಯ ಠಾಕ್ರೆ ತಿಳಿಸಿದ್ದಾರೆ. ಇದರೊಂದಿಗೆ ಬಿಜೆಪಿ ಜತೆಗಿನ ದೀರ್ಘಾವಧಿಯ ಮೈತ್ರಿಯನ್ನು ಕಡಿದುಕೊಳ್ಳುವುದಾಗಿ ಅವರು ಹೇಳಿದ್ದಾರೆ.

ನಗರದಲ್ಲಿ ನಡೆದ ಪಕ್ಷದ ಸಮಾರಂಭದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಪಕ್ಷ ಸ್ವಂತ ಶಕ್ತಿಯ ಮೇಲೆ ಅಧಿಕಾರ ಹಿಡಿಯಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

‘ನಾವು ಒಂದು ವರ್ಷದಲ್ಲಿ ಸರ್ಕಾರದಿಂದ ಹೊರ ನಡೆಯಲಿದ್ದು, ನಮ್ಮದೇ ಶಕ್ತಿಯ ಮೇಲೆ ಅಧಿಕಾರಕ್ಕೆ ಬರಲಿದ್ದೇವೆ. ಪಕ್ಷದ ಕಾರ್ಯಕರ್ತರು ಆ ನಿಟ್ಟಿನಲ್ಲಿ ಈಗಿನಿಂದಲೇ ಸಿದ್ಧತೆ ಆರಂಭಿಸಬೇಕು’ ಎಂದು ಕರೆ ನೀಡಿದ್ದಾರೆ.

‘ಮಹಾರಾಷ್ಟ್ರದಲ್ಲಿ ರಾಜಕೀಯದ ಬಿಸಿ ಹೆಚ್ಚಾಗಿದೆ. ಚುನಾವಣೆ ಯಾವಾಗ ನಡೆಯುತ್ತದೆ ಎಂಬುದು ಗೊತ್ತಿಲ್ಲ. ಆದರೆ, ಒಂದು ವರ್ಷದೊಳಗೆಯೇ ನಡೆಯುವಂತೆ ತೋರುತ್ತಿದೆ’ ಎಂದು ಅವರು ಹೇಳಿದ್ದಾರೆ.

ಶಿವಸೇನೆ ಇಂತಹ ಹೇಳಿಕೆ ನೀಡುತ್ತಿರುವುದು ಇದೇ ಮೊದಲಲ್ಲ. ರಾಜ್ಯದಲ್ಲಿ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದ್ದು, ಜನರು ಸಮಸ್ಯೆಗೆ ಸಿಲುಕಿದ್ದಾರೆ ಎಂದು ಸರ್ಕಾರವನ್ನು ವಿರೋಧಿಸಿ ಕಳೆದ ಸೆಪ್ಟೆಂಬರ್‌ನಲ್ಲಿಯೂ ಇಂತಹದೇ ಹೇಳಿಕೆ ನೀಡಿತ್ತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.