ಭಾನುವಾರ, ಮಾರ್ಚ್ 7, 2021
19 °C

ಜ.12ರಿಂದ ಆಳ್ವಾಸ್ ವಿರಾಸತ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಜ.12ರಿಂದ ಆಳ್ವಾಸ್ ವಿರಾಸತ್

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ನಡೆಯುವ 24ನೇ ವರ್ಷದ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ 'ಆಳ್ವಾಸ್ ವಿರಾಸತ್' ಜನವರಿ 12ರಿಂದ 14ವರೆಗೆ ಇಲ್ಲಿಗೆ ಸಮೀಪದ ಪುತ್ತಿಗೆಯ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ರಂಗಮಂದಿರದಲ್ಲಿ ನಡೆಯಲಿದೆ.

‘ವಿರಾಸತ್ ಕಾರ್ಯಕ್ರಮಗಳು ದಿನವೊಂದಕ್ಕೆ ಎರಡು ಅವಧಿಗಳದ್ದಾಗಿದ್ದು ಪೂರ್ವಾರ್ಧದಲ್ಲಿ ಸಂಗೀತ, ಉತ್ತಾರಾರ್ಧದಲ್ಲಿ ನೃತ್ಯ ನಡೆಯಲಿದೆ.  ಪ್ರತಿದಿನ ಸಂಜೆ 6 ಗಂಟೆಗೆ ಪ್ರಾರಂಭವಾಗುವ ಕಾರ್ಯಕ್ರಮಗಳು ರಾತ್ರಿ 10.30ಕ್ಕೆ ಮುಕ್ತಾಯಗೊಳ್ಳುತ್ತವೆ’ ಎಂದು ಸಂಸ್ಥೆಯ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ಜನವರಿ 12ರಂದು ಸಂಜೆ 5.15ರಿಂದ ಸಾಂಸ್ಕೃತಿಕ ತಂಡಗಳ ಮೆರವಣಿಗೆ ಇರಲಿದೆ. 150 ಅಡಿ ಉದ್ದ, 60 ಅಡಿ ಅಗಲದ ಬೃಹತ್ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. 40 ಸಾವಿರಕ್ಕೂ ಹೆಚ್ಚು ಪ್ರೇಕ್ಷಕರು ಕುಳಿತು ನೋಡಲು ಆಸನದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ’ ಎಂದರು.

ಮಾಹಿತಿಗೆ 08258-261229 ಸಂಪರ್ಕಿಸಬಹುದು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.