ಶುಕ್ರವಾರ, ಫೆಬ್ರವರಿ 26, 2021
22 °C

ಕೃಷ್ಣರಾಜ ಕ್ಷೇತ್ರದಿಂದ ಸ್ಪರ್ಧೆ: ಪ್ರೇಮಕುಮಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೃಷ್ಣರಾಜ ಕ್ಷೇತ್ರದಿಂದ ಸ್ಪರ್ಧೆ: ಪ್ರೇಮಕುಮಾರಿ

ಮೈಸೂರು: ಬಿಜೆಪಿ ಮುಖಂಡ ಎಸ್.ಎ.ರಾಮದಾಸ್ ವಿರುದ್ಧ ನಂಬಿಕೆ ದ್ರೋಹದ ಆರೋಪ ಮಾಡಿ ಸುದ್ದಿಯಾಗಿದ್ದ ಪ್ರೇಮಕುಮಾರಿ ಅವರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮೈಸೂರಿನ ಕೃಷ್ಣರಾಜ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ.

‘ನಾನು ಸಾಕಷ್ಟು ನೋವು ಅನುಭವಿಸಿದ್ದೇನೆ. ಸಮಾಜದಲ್ಲಿ ನೋವು ಅನುಭವಿಸುವವರಿಗೆ ಏನಾದರೂ ಮಾಡಬೇಕು ಎಂಬ ಉದ್ದೇಶದಿಂದ ರಾಜಕೀಯಕ್ಕೆ ಬರಲು ನಿರ್ಧರಿಸಿದ್ದೇನೆ. ಇದರ ಹಿಂದೆ ಯಾರ ಒತ್ತಡವೂ ಇಲ್ಲ’ ಎಂದು ಸುದ್ದಿವಾಹಿನಿಯೊಂದಕ್ಕೆ ಹೇಳಿದ್ದಾರೆ.

‘ಹಲವು ಪಕ್ಷಗಳಿಂದ ಆಹ್ವಾನ ಬಂದಿದೆ. ಎಲ್ಲ ಆಹ್ವಾನಗಳನ್ನು ತಿರಸ್ಕರಿಸಿದ್ದೆ. ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಬೇಕೆ ಅಥವಾ ಯಾವುದಾದರೂ ಪಕ್ಷವನ್ನು ಸೇರಬೇಕೆ ಎಂಬುದನ್ನು ಮುಂದಿನ ದಿನಗಳಲ್ಲಿ ನಿರ್ಧರಿಸಲಾಗುವುದು’ ಎಂದಿದ್ದಾರೆ.

ಸ್ಪರ್ಧಿಸುವ ಹಕ್ಕು ಇದೆ: ‘ಪ್ರೇಮಕುಮಾರಿ ರಾಜಕೀಯಕ್ಕೆ ಬಂದರೆ ನನ್ನ ಅಭ್ಯಂತರವಿಲ್ಲ. ಪ್ರಜಾಪ್ರಭುತ್ವದಲ್ಲಿ ಯಾರು ಬೇಕಾದರೂ ಸ್ಪರ್ಧಿಸಲು ಅವಕಾಶವಿದೆ. ಅವರ ಸ್ಪರ್ಧೆಯ ಹಿಂದೆ ಕಾಣದ ಕೈಗಳ ಕುಮ್ಮಕ್ಕಿದೆ’ ಎಂದು ರಾಮದಾಸ್‌ ಪ್ರತಿಕ್ರಿಯಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.