7

ಜನವರಿ 8 ರಂದು ಸಿಎಂ ಸಿದ್ದರಾಮಯ್ಯ ಜಿಲ್ಲಾ ಪ್ರವಾಸ

Published:
Updated:

ಉಡುಪಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನವರಿ 8 ರಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿರುವುದರಿಂದ ಪೂರ್ವ ಸಿದ್ಧತೆ ಬಗ್ಗೆ ಚರ್ಚಿಸಲು ಸಚಿವ ಪ್ರಮೋದ್ ಮಧ್ವರಾಜ್ ಅವರು ಶುಕ್ರವಾರ ಅಧಿಕಾರಿಗಳ ಸಭೆ ನಡೆಸಿದರು.

ಉಡುಪಿ, ಕಾಪು ಮತ್ತು ಬೈಂದೂರಿಗೆ ಅವರು ಭೇಟಿ ನೀಡಿ, ಪೂರ್ಣಗೊಂಡಿರುವ ಕಾಮಗಾರಿ ಉದ್ಘಾಟಿಸುವರು. ಜತೆಗೆ ಹೊಸ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.  ನಾಲ್ಕೂವರೆ ವರ್ಷದಲ್ಲಿ ಸರ್ಕಾರ ಮಾಡಿದ ಮಾಡಿದ ಸಾಧನೆಗಳ ವಿವರನ್ನು ಮುದ್ರಿಸಿ. ಜನ ಸಾಮಾನ್ಯರಿಗೆ ಅರ್ಥವಾಗುವಂತಹ ಭಾಷೆ ಬಳಸಿ. ವಿವಿಧ ಜವಾಬ್ದಾರಿಗಳನ್ನು ಅಧಿಕಾರಿಗಳಿಗೆ ಅವರು ವಹಿಸಿದರು.

ಜಿಲ್ಲೆಯ ಅಭಿವೃದ್ಧಿಗೆ ಸಾವಿರಾರು ಕೋಟಿಗಳನ್ನು ಮುಖ್ಯಮಂತ್ರಿ ಬಿಡುಗಡೆ ಮಾಡಿದ್ದು, ಸರ್ಕಾರದ ಅನ್ನಭಾಗ್ಯ, ಕ್ಷೀರಭಾಗ್ಯ, ವಿದ್ಯಾಸಿರಿ, ಕ್ಷೀರಧಾರೆ, ಕೃಷಿ ಭಾಗ್ಯ, ಮನಸ್ವಿನಿ, ಮೈತ್ರಿಯಂತಹ ಯೋಜನೆಗಳು ಯಶಸ್ವಿಯಾಗಿವೆ. ಜನಪರ ಸರ್ಕಾರದ ಜನಪರ ಯೋಜನೆಗಳ ಬಗ್ಗೆ ಮಾಹಿತಿ ನೀಡುವ ಕಾರ್ಯಕ್ರಮವೂ ಇದಾಗಿದೆ ಎಂದು ಸಚಿವರು ಹೇಳಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿವಾನಂದ ಕಾಪಶಿ, ಹೆಚ್ಚುವರಿ ಜಿಲ್ಲಾಧಿಕಾರಿ ಜಿ. ಅನುರಾಧ ಉಪಸ್ಥಿತರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry