3

ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್‌ ಅಧಿಕಾರಕ್ಕೆ: ವಿಶ್ವಾಸ

Published:
Updated:
ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್‌ ಅಧಿಕಾರಕ್ಕೆ: ವಿಶ್ವಾಸ

ವಿಜಯಪುರ: ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್‌ನ್ನು ಅಧಿಕಾರಕ್ಕೆ ತಂದು ಸರ್ಕಾರದ ಜನಪರವಾದ ಯೋಜನೆಗಳನ್ನು ಮತ್ತಷ್ಟು ವಿಸ್ತಾರಗೊಳಿಸಬೇಕು ಎಂದು ಕಾಂಗ್ರೆಸ್ ನಾಯಕ ಕೆ.ವೆಂಕಟಸ್ವಾಮಿ ಹೇಳಿದರು. 10ನೇ ವಾರ್ಡಿನಲ್ಲಿ ಭಾನುವಾರ ಆಯೋಜಿಸಿದ್ದ ‘ಮನೆ ಮನೆಗೆ ಕಾಂಗ್ರೆಸ್’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ರಾಜ್ಯದಲ್ಲಿ 56 ಸಾವಿರ ಮತಗಟ್ಟೆಗಳಿವೆ. ಪ್ರತಿ ಮತಗಟ್ಟೆಗೆ ತಲಾ 20 ಜನರ ಸಮಿತಿ ರಚಿಸಿಕೊಂಡು ಮನೆ ಮನೆ ಸಂಪರ್ಕಿಸಲು ಪಕ್ಷ ಯೋಜನೆ ರೂಪಿಸಿದೆ. ಮುಂಬರುವ ವಿಧಾನಸಭಾ ಚುನಾವಣೆ ಮೇಲೆ ಕಣ್ಣಿಟ್ಟು ಮತಗಟ್ಟೆ ಹಂತದಲ್ಲಿ ಪಕ್ಷದ ಬಲವರ್ಧನೆಗೆ ಮುಂದಾಗಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ, ಸರ್ಕಾರದ ಸಾಧನೆಗಳುಳ್ಳ ಕಿರುಹೊತ್ತಗೆಯನ್ನು ಪ್ರತಿ ನಾಗರಿಕರಿಗೆ ತಲುಪಿಸಬೇಕು ಎಂದರು.

ಕಾಂಗ್ರೆಸ್‌ ಸರ್ಕಾರದ ಸಾಧನೆ, ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ಮುದ್ರಿಸಿದ ಕರಪತ್ರವನ್ನು ಪ್ರತಿ ಮನೆಗೆ ತಲುಪಿಸಬೇಕು ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಮಚಂದ್ರಪ್ಪ ಮಾತನಾಡಿ, ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ನೀಡಿದ್ದ 168 ಭರವಸೆಗಳಲ್ಲಿ ಸರ್ಕಾರ 155ಕ್ಕೂ ಹೆಚ್ಚು ಭರವಸೆಗಳನ್ನು ಈಡೇರಿಸಿದೆ. ಉಳಿದ 10 ಭರವಸೆಗಳನ್ನು ತ್ವರಿತವಾಗಿ ಸಾಕಾರಗೊಳಿಸಲಿದೆ ಎಂದರು.

ಮುಂದಿನ ಚುನಾವಣೆಯಲ್ಲಿ ಸೋಲಿನ ಭಯದಲ್ಲಿರುವ ಬಿಜೆಪಿ ಜನರನ್ನು ದಿಕ್ಕು ತಪ್ಪಿಸುತ್ತಿದೆ. ಬಿಜೆಪಿ ಸರ್ಕಾರದ ಆಡಳಿತದ ಅವಧಿಯಲ್ಲಿ ಮಾಡಿರುವ ಹಗರಣಗಳನ್ನು ಮುಚ್ಚಿಹಾಕಿಕೊಳ್ಳುವ ಉದ್ದೇಶದಿಂದ ಪರಿವರ್ತನಾ ಯಾತ್ರೆ ಹಮ್ಮಿಕೊಂಡಿದೆ. ಬಿಜೆಪಿಯಲ್ಲಿನ ಗುಂಪುಗಾರಿಕೆಯನ್ನು ಇದುವರೆಗೂ ಸರಿಪಡಿಸಿಕೊಳ್ಳಲು ಸಾಧ್ಯವಾಗಿಲ್ಲ. ಜನರು ಕೊಟ್ಟ ಅಧಿಕಾರ ದುರ್ಬಳಕೆ ಮಾಡಿಕೊಂಡು ಮೂರು ಮಂದಿ ಮುಖ್ಯಮಂತ್ರಿಗಳು ಅಧಿಕಾರ ಅನುಭವಿಸಿದರೆ ಹೊರತು ರಾಜ್ಯದ ಅಭಿವೃದ್ಧಿ ಮಾಡಲಿಲ್ಲ ಎಂದರು.

ಜಿಲ್ಲಾ ಕಾಂಗ್ರೆಸ್ ಘಟಕದ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮುನಿರಾಜು, ನಗರ ಘಟಕದ ಅಧ್ಯಕ್ಷ ವಿ.ಎಂ.ನಾಗರಾಜು, ಪ್ರಧಾನ ಕಾರ್ಯದರ್ಶಿ ಎಸ್.ಮಂಜುನಾಥ್, ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ಮುನಿಚಿನ್ನಪ್ಪ, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಮಹೆಬೂಬ್ ಪಾಷ, ಮುನಿಕೃಷ್ಣಪ್ಪ, ರಮೇಶ್, ಗಿರೀಶ್ ಯಾದವ್, ಹರೀಶ್, ಮೋಹನ್ಶೇ 80ರಷ್ಟು ಜನ ಸರ್ಕಾರದ ಸೌವಲತ್ತು ಪಡೆದಿದ್ದಾರೆ

ದೇವನಹಳ್ಳಿ ಬ್ಲಾಕ್ ಕೆಪಿಸಿಸಿ ಸದಸ್ಯ ವಿ.ಮಂಜುನಾಥ್ ಮಾತನಾಡಿ, ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಬಡವರು, ಅಲ್ಪಸಂಖ್ಯಾತರು, ಹಿಂದುಳಿದ ವರ್ಗದವರು ಸೇರಿದಂತೆ ಎಲ್ಲಾ ಜನರ ಏಳಿಗೆಗೆ ಜಾರಿಗೆ ತಂದಿರುವ ಜನಪರವಾದ ಯೋಜನೆಗಳನ್ನು ಜಾರಿಗೆ ತಂದಿದ್ದು, ಶೇ 80 ರಷ್ಟು ಮಂದಿ ಸರ್ಕಾರದ ಪ್ರಯೋಜನ ಪಡೆದುಕೊಂಡಿದ್ದಾರೆ. ಪಕ್ಷದ ಕಾರ್ಯಕರ್ತರು ಈ ಯೋಜನೆಗಳನ್ನು ಜನರಿಗೆ ತಿಳಿಸುವಂತಹ ಕೆಲಸ ಮಾಡಬೇಕು ಎಂದರು.

ಶೇ 80ರಷ್ಟು ಜನ ಸರ್ಕಾರದ ಸೌವಲತ್ತು ಪಡೆದಿದ್ದಾರೆ

ದೇವನಹಳ್ಳಿ ಬ್ಲಾಕ್ ಕೆಪಿಸಿಸಿ ಸದಸ್ಯ ವಿ.ಮಂಜುನಾಥ್ ಮಾತನಾಡಿ, ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಬಡವರು, ಅಲ್ಪಸಂಖ್ಯಾತರು, ಹಿಂದುಳಿದ ವರ್ಗದವರು ಸೇರಿದಂತೆ ಎಲ್ಲಾ ಜನರ ಏಳಿಗೆಗೆ ಜಾರಿಗೆ ತಂದಿರುವ ಜನಪರವಾದ ಯೋಜನೆಗಳನ್ನು ಜಾರಿಗೆ ತಂದಿದ್ದು, ಶೇ 80 ರಷ್ಟು ಮಂದಿ ಸರ್ಕಾರದ ಪ್ರಯೋಜನ ಪಡೆದುಕೊಂಡಿದ್ದಾರೆ. ಪಕ್ಷದ ಕಾರ್ಯಕರ್ತರು ಈ ಯೋಜನೆಗಳನ್ನು ಜನರಿಗೆ ತಿಳಿಸುವಂತಹ ಕೆಲಸ ಮಾಡಬೇಕು ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry